ಹೇಮಾವತಿ ಕೆನಾಲ್ ಕಿಚ್ಚು: ಪೈಪ್ ತಂದ ಲಾರಿಗೆ ಅಡ್ಡ ಮಲಗಿ ಪ್ರತಿಭಟನೆ

1 min read

 

ಕೆನಾಲ್ ಕಾಮಗಾರಿ ಸ್ಥಗಿತಕ್ಕಾಗಿ ನಿಲ್ಲದ ಹೋರಾಟ:
ಪೈಪ್ ತಂದ ಲಾರಿಗಳನ್ನು ತಡೆದು ಪ್ರತಿಭಟನೆ

Tumkurnews
ತುಮಕೂರು: ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವ ಹೇಮಾವತಿ ನಾಲೆಯ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗಾಗಿ ಬೃಹತ್ ಪೈಪ್‍ಗಳನ್ನು ಹೊತ್ತು ತರುತ್ತಿದ್ದ ಲಾರಿಗಳನ್ನು ಭಾನುವಾರ ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಬಳಿ ರೈತರು ತಡೆದು ವಾಪಸ್ ಕಳಿಸಿದರು.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧದ ಕಹಳೆ: ತುಮಕೂರಿನಲ್ಲಿ ಹೋರಾಟ ಆರಂಭ
ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಪ್ರತಿಭಟನೆ ನಡೆಸಿ ಲಾರಿಗಳನ್ನು ತಡೆದರು. ಮಾಜಿ ಸಚಿವ ಸೊಗಡು ಶಿವಣ್ಣ ಲಾರಿಗೆ ಅಡ್ಡ ಮಲಗಿ ಪ್ರತಿಭಟಿಸಿದರು. ಯಾವುದೇ ಕಾರಣಕ್ಕೂ ಈ ಕೆನಾಲ್ ಕಾಮಗಾರಿ ಮುಂದುವರೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಒತ್ತಾಯಿಸಿ ನಡೆದಿರುವ ಹೋರಾಟ ತೀವ್ರಗೊಂಡಿದೆ. ಇತ್ತೀಚೆಗೆ ಗುಬ್ಬಿ ತಾಲ್ಲೂಕು ಡಿ.ರಾಂಪುರ ಸಮೀಪ ಕೆನಾಲ್ ಕಾಮಗಾರಿ ನಡೆದಿರುವ ಸ್ಥಳದಲ್ಲಿ ವಿವಿಧ ಪಕ್ಷಗಳ ಶಾಸಕರು, ಮುಖಂಡರು, ರೈತ ಸಂಘಟನೆ, ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಕೆನಲ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದರು. ಈ ನಡುವೆ ಭಾನುವಾರ ನಾಲೆ ನಿರ್ಮಾಕ್ಕಾಗಿ ಸುಮಾರು ಹನ್ನೆರಡು ಅಡಿ ಎತ್ತರದ ಬೃಹತ್ ಪೈಪ್‍ಗಳನ್ನು ಲಾಗಿಗಳಲ್ಲಿ ತರಲಾಗುತ್ತಿತ್ತು. ಪೈಪ್ ತರುತಿದ್ದ ಸುಮಾರು 20 ಲಾರಿಗಳನ್ನು ಮಾರ್ಗ ಮಧ್ಯದಲ್ಲಿ ಸಿ.ಎಸ್.ಪುರ ಬಳಿ ರೈತರು ತಡೆದು ಪ್ರತಿಭಟನೆ ನಡೆಸಿದರು.

ತುಮಕೂರು: ಧಾರಾಕಾರವಾಗಿ ಸುರಿದ ಮಳೆ: ವಿಡಿಯೋ
ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ವಿವಿಧ ಸಂಘಟನೆಗಳ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಂಡು ಲಾರಿಗಳನ್ನು ತಡೆದು ವಾಪಸ್ ಕಳುಹಿಸಿದರು.
ಚಿತ್ರ: ಪೈಪ್ ತಂದ ಲಾರಿಗೆ ಅಡ್ಡ ಮಲಗಿ ಮಾಜಿ ಸಚಿವ ಸೊಗಡು‌ ಶಿವಣ್ಣ ಪ್ರತಿಭಟನೆ ನಡೆಸಿದರು.

About The Author

You May Also Like

More From Author

+ There are no comments

Add yours