SSLC, ಪಿಯುಸಿ, ಸಿಇಟಿ ಪರೀಕ್ಷಾ ಅವಾಂತರ: ಸಿಎಂಗೆ ಬಿಜೆಪಿ ಎಂಎಲ್ಸಿ ಬಹಿರಂಗ ಪತ್ರ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಎಸ್.ಎಸ್.ಎಲ್.ಸಿ., ಪಿಯುಸಿ, ಸಿಇಟಿ ಪರೀಕ್ಷಾ ಅವಾಂತರ: ಸಿಎಂಗೆ ಬಿಜೆಪಿ ಎಂಎಲ್ಸಿ ಬಹಿರಂಗ ಪತ್ರ

Www.tumkurnews.in
ತುಮಕೂರು: ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಸಿಇಟಿ ವಾರ್ಷಿಕ ಪರೀಕ್ಷೆಯಲ್ಲಿ ನಡೆದ ಅವಾಂತರಗಳು ಹಾಗೂ ಪ್ರಸ್ತುತ ಶಿಕ್ಷಣ ಇಲಾಖೆಯಲ್ಲಿನ ಇತರೆ ಅವಾಂತರಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮ್ಯಯನವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರಿಂದಾಗಿ ಫಲಿತಾಂಶ ಶೇ.40ಕ್ಕೂ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವರು ಸಮಜಾಯಿಸಿ ನೀಡಿರುವುದು ಆತಂಕಕಾರಿಯಾಗಿದೆ. ಇವರ ಹೇಳಿಕೆಯನ್ನು ಗಮನಿಸಿದರೆ ನಮ್ಮ ರಾಜ್ಯದಲ್ಲಿ ಇಷ್ಟು ವರ್ಷಗಳ ಕಾಲ ಬಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಅಕ್ರಮವೇ ಎಂದು ಅವರು ಬಹಿರಂಗ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಸರ್ಕಾರ ಅಥವಾ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶೇ.20 ಕೃಪಾಂಕ ನೀಡಿರುವುದು ಅಕ್ಷಮ್ಯ ಅಪರಾಧ. ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದು ಸರ್ಕಾರದ ಹೊಣೆಗಾರಿಕೆ ಎಂದಿದ್ದಾರೆ. ರಾಜ್ಯ ಪಠ್ಯಕ್ರಮ ಕಲಿಯುತ್ತಿರುವ ಮಕ್ಕಳಿಗೆ ಯಾವ ರೀತಿಯ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ, ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು, ಈ ಕುರಿತು ಆಳವಾದ ಅಧ್ಯಯನ ಮಾಡಿ ವರದಿ ನೀಡಲು ತಜ್ಞರ ಸಮಿತಿಯನ್ನು ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಕೆಇಎ ಪರೀಕ್ಷಾ ಮಂಡಳಿಯ ನಿರ್ದೇಶಕಿ ರಮ್ಯ ಅವರು ಸಿಇಟಿ ಪರೀಕ್ಷೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಅಂಕಗಳ ಪ್ರಶ್ನೆಗಳು ಪಠ್ಯಕ್ರಮದಿಂದ ಹೊರಗಿನ ಪ್ರಶ್ನೆಗಳಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಗಮನಿಸಿದರೆ ಕೆಇಎಗೆ ಇಂಜಿನಿಯರಿಂಗ್, ಮೆಡಿಕಲ್, ಪ್ಯಾರಾಮೆಡಿಕಲ್ ಮತ್ತು ಇತರೆ ವಿಭಾಗಗಳ ಶಿಕ್ಷಣಕ್ಕೆ ಮಾನದಂಡವಾಗಿರುವ ಪರೀಕ್ಷೆಯನ್ನು ಇಲಾಖೆ ಎಷ್ಟು ಬೇಜವಾಬ್ದಾರಿಯಿಂದ ನಡೆಸುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೆಇಎ ಪರೀಕ್ಷಾ ಮಂಡಳಿ ಎಷ್ಟು ಲಕ್ಷ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಇದರ ಹೊಣೆ ಹೊತ್ತ ಅಧಿಕಾರಿಗಳನ್ನು ಬೇರೆ ಇಲಾಖೆಗೆ ವರ್ಗ ಮಾಡಿದರಷ್ಟೇ ಸಾಲದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

About The Author

You May Also Like

More From Author

+ There are no comments

Add yours