ತುಮಕೂರಿನಲ್ಲಿ ತಗ್ಗು ಪ್ರದೇಶಗಳಿಗೆ ನುಗ್ಗಿದ ಮಳೆ ನೀರು: ಶಾಸಕ ಜ್ಯೋತಿ ಗಣೇಶ್ ಸ್ಥಳ ಪರಿಶೀಲನೆ

1 min read

ಮುಂದಿನ ದಿನಗಳಲ್ಲಿ ತುಮಕೂರು ನಗರದಲ್ಲಿ ಭಾರೀ ಮಳೆ ಸಾಧ್ಯತೆ: ಮುಂಜಾಗೃತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ: ಶಾಸಕ ಜಿ.ಬಿ.ಜ್ಯೋತಿಗಣೇಶ್

ತಗ್ಗು ಪ್ರದೇಶಗಳಿಗೆ ನುಗ್ಗಿದ ಮಳೆ ನೀರು: ನಗರದ ಹಲವೆಡೆ ಶಾಸಕರಿಂದ ಸ್ಥಳ ಪರಿಶೀಲನೆ

Tumkurnews
ತುಮಕೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಹಲವೆಡೆ ಸ್ಥಳ ಪರಿಶೀಲನೆ ನಡೆಸಿದರು.

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಜಿಲ್ಲೆಗೆ ಮರಣ ಶಾಸನ: ಶಾಸಕ ಜಿ.ಬಿ ಜ್ಯೋತಿಗಣೇಶ್
ನಗರದ ಉಪ್ಪಾರಹಳ್ಳಿಯ ಮುಖ್ಯರಸ್ತೆ ಹಾಗೂ ಶೆಟ್ಟಿಹಳ್ಳಿ ಗೇಟ್ ಅಂಡರ್‌ ಪಾಸ್ ಬಳಿ ಇರುವ ರಾಜಗಾಲುವೆಯಿಂದ ಬರುವಂತಹ ಮಳೆ ನೀರು ಸೆಕ್ರೆಡ್ ಹಾರ್ಟ್ ಕಾಲೇಜಿನ ಹಿಂಭಾಗದ ಮನೆಗಳಿಗೆ ನುಗ್ಗಿದೆ ಎಂದು ಶಾಸಕರಿಗೆ ಕರೆ ಬಂದ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಖುದ್ದು ತಿಳಿಯಲು ಸ್ಥಳಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮಹಾನಗರ ಪಾಲಿಕೆ ಹಾಗೂ ಪಿ.ಡಬ್ಲು.ಡಿ ಅಧಿಕಾರಿಗಳಿಗೆ ಮುಂದೆ ಈ ಸಮಸ್ಯೆ ಉಂಟಾಗದಂತೆ ರಾಜಗಾಲುವೆಗೆ ಮಳೆ ನೀರು ತಲುಪಲು ಪರ್ಯಾಯ ಚರಂಡಿ ವ್ಯವಸ್ಥೆ ಮಾಡಲು ತಿಳಿಸಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗೃತವಾಗಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಾಗೃತೆ ವಹಿಸಬೇಕು. ರಾಜಗಾಲುವೆಗಳಲ್ಲಿ, ಚರಂಡಿಗಳಲ್ಲಿ ಹೂಳು ತುಂಬಿರುವುದನ್ನು ಸ್ವಚ್ವಗೊಳಿಸಿ ಮಳೆ ನೀರು ಸರಾಗವಾಗಿ ಹರಿಯಲು ಕ್ರಮ ವಹಿಸಬೇಕು. ಮಳೆಯಿಂದ ತೊಂದರೆ ಉಂಟಾದರೆ 24 ಗಂಟೆಗಳು ಸಾರ್ವಜನಿಕರಿಗೆ ಸಹಾಯ ಹಸ್ತ ಚಾಚಲು ಸಹಾಯವಾಣಿಯ ಪೋನ್ ನಂಬರ್ ಹಾಗೂ ಅಯಾ ವಾರ್ಡ್’ಗಳ ಇಂಜನಿಯರ್ ಪೋನ್ ನಂಬರ್‌ಗಳನ್ನು ಸಾರ್ವಜನಕರಿಗೆ ಸುಲಭವಾಗಿ ಸಿಗುವಂತೆ ವ್ಯವಸ್ಥೆ ಮಾಡಿ ಸಮಸ್ಯೆ ಉಂಟಾದ ತಕ್ಷಣವೇ ಸಮಸ್ಯೆ ಬಗೆಹರಿಸಲು ಕಾರ್ಯ ಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್‍ ತಿಳಿಸಿದರು.

ಗ್ರಂಥಾಲಯದ ಕಟ್ಟಡವನ್ನು ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಬಳಸಿ: ಶಾಸಕ ಜಿ.ಬಿ.ಜ್ಯೋತಿಗಣೇಶ್
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪಿ.ಡಬ್ಲು.ಡಿ ಅಧಿಕಾರಿಗಳು, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಿ.ಎನ್.ರಮೇಶ್, ವಿಷ್ಣುವರ್ಧನ್ ಮುಂತಾದವರು ಇದ್ದರು.

About The Author

You May Also Like

More From Author

+ There are no comments

Add yours