ತುಮಕೂರು: ಜಿಲ್ಲೆಯಲ್ಲಿರುವ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ಪ್ರಕರಣಗಳೆಷ್ಟು? ಡಿಎಚ್ಒ ಮಾಹಿತಿ

1 min read

 

ಮಲೇರಿಯಾ ರೋಗ ನಿರ್ಮೂಲನೆಗೆ ಅರಿವು ಅಗತ್ಯ: ಡಾ.ಮಂಜುನಾಥ್

Tumkurnews
ತುಮಕೂರು: ರಾಜ್ಯದಲ್ಲಿ ಮಲೇರಿಯಾ ರೋಗವನ್ನು 2025ಕ್ಕೆ ಸಂಪೂರ್ಣ ನಿವಾರಣೆ ಮಾಡುವ ಗುರಿಯನ್ನು ಹೊಂದಿದ್ದು, ಮಲೇರಿಯಾ ರೋಗ ನಿರ್ಮೂಲನೆ ಮಾಡಲು ಸಮುದಾಯ ಹಂತದಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು.

ತುಮಕೂರು: ಜೆಸಿಬಿಗೆ ಅಡ್ಡ ನಿಂತ ಪೊಲೀಸ್! ಮುಂದೆ ಆಗಿದ್ದೇನು? ವಿಡಿಯೋ
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಲೇರಿಯಾ ರೋಗ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಮಲೇರಿಯಾ ರೋಗದ ಬಗ್ಗೆ ಅರಿವು ಮೂಡಿಸಲು ವಿಶ್ವದಾದ್ಯಂತ 2008 ರಿಂದ ಪ್ರತಿ ವರ್ಷ ಏಪ್ರಿಲ್ 25ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2024ರಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ಕಂಡು ಬಂದಿಲ್ಲ. ಹೊರ ರಾಜ್ಯದಿಂದ ಜಿಲ್ಲೆಗೆ ವಲಸೆ ಬಂದವರಲ್ಲಿ 14 ಪ್ಲಾಸ್ಮೊಡಿಯಂ ವೈವ್ಯಾಕ್ಸ್ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದು, 123 ಡೆಂಗ್ಯೂ ಹಾಗೂ 30 ಚಿಕನ್‍ಗುನ್ಯಾ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ತುಮಕೂರು: ರಾಜಕಾಲುವೆಗೆ ತ್ಯಾಜ್ಯ ನೀರು ಬಿಟ್ಟ ಕಾರ್ಖಾನೆ: ಜಿಲ್ಲಾಧಿಕಾರಿ ಭೇಟಿ
ಸಾರ್ವಜನಿಕರು ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಮಲೇರಿಯಾ ದೃಢಪಟ್ಟಲ್ಲಿ ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳಬೇಕು. ಮನೆಗಳಲ್ಲಿ ಸೊಳ್ಳೆ ಪರದೆ, ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಿಕೊಂಡು ಮನೆ ಸುತ್ತ ಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ತುಮಕೂರು: ಮಳೆಯಲ್ಲಿ ಪರದಾಡಿದ ಜನ: ವಿಡಿಯೋ
ಜಿಲ್ಲೆಯಲ್ಲಿರುವ ನಕಲಿ ವೈದ್ಯರು, ಅಂಬ್ಯುಲೆನ್ಸ್ ಸಮಸ್ಯೆ ಮತ್ತು ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ಸಂಭವಿಸಿದಂತೆ ಮಾಧ್ಯಮವರೊಂದಿಗೆ ಚರ್ಚಿಸಿದ ಅವರು ನಕಲಿ ವೈದ್ಯರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರೋಗಿಗಳ ನೆರವಿಗಾಗಿ ಜಿಲ್ಲೆಯಲ್ಲಿ 42 ಅಂಬ್ಯುಲೆನ್ಸ್’ಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ತುಮಕೂರು: ಮಳೆ ಅನಾಹುತ ತಡೆಯಲು ಅಲರ್ಟ್: ಸಹಾಯವಾಣಿ ಸ್ಥಾಪನೆ
ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಚಂದ್ರಶೇಖರ್, ಕೀಟ ಶಾಸ್ತ್ರಜ್ಞ ಸಿದ್ದಪ್ಪ ಸ್ವಾಮಿ, ಆರೋಗ್ಯ ಮೇಲ್ವಿಚಾರಕ ಲಕ್ಷ್ಮಿಕಾಂತಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours