ರಸ್ತೆ ಕುಸಿತ: ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಭೇಟಿ: ಸ್ಥಳೀಯರಿಗೆ ಎಚ್ಚರಿಕೆ

1 min read

ರಸ್ತೆ ಕುಸಿತ: ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಭೇಟಿ

Tumkurnews
ತುಮಕೂರು: ನಗರದ ಶೆಟ್ಟಿಹಳ್ಳಿ ಅಂಡರ್ ಪಾಸ್’ಗೆ ಹೊಂದಿಕೊಂಡಿರುವ ರಸ್ತೆ ಕುಸಿದ ಹಿನ್ನೆಲೆಯಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತುಮಕೂರು: ಭಾರೀ ಮಳೆಗೆ ಶೆಟ್ಟಿಹಳ್ಳಿ ಅಂಡರ್ ಪಾಸ್ ಕುಸಿತ

ಈ ವೇಳೆ ಮಾತನಾಡಿದ ಅವರು, ಈ ಜಾಗದಲ್ಲಿ ಗುಂಡಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಸ್ತೆ ಬಂದ್ ಮಾಡಿದ್ದು, ಗುಂಡಿ ಮುಚ್ಚಿದ್ದಾರೆ. ಈಗಾಗಲೇ ನಾನು ಮಹಾನಗರ ಪಾಲಿಕೆ ಆಯುಕ್ತರ ಜತೆ ಈ ಮಾತನಾಡಿದ್ದು, ಬೆಂಗಳೂರಿನಿಂದ ತಜ್ಞರನ್ನು ಕರೆಸಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ನಗರದಲ್ಲಿ ಸತತವಾಗಿ ಮಳೆ ಆಗುತ್ತಿರುವುದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಹೂಳು ತುಂಬಿರುವ ಚರಂಡಿಗಳನ್ನು ಗಮನಿಸಿ ಸ್ವಚ್ಛಗೊಳಿಸುವ ಮೂಲಕ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳು ಸೂಚಿಸಿದ್ದೇನೆ ಎಂದರು.
ಮಳೆ ಬಂದು ರಸ್ತೆಗಳಲ್ಲಿ ನೀರು ಹರಿಯುವ ಸಂದರ್ಭದಲ್ಲಿ ವಾಹನ ಸವಾರರ ಎಚ್ಚರಿಕೆಯಿಂದ ಸಂಚರಿಸಬೇಕು. ನೀರು ಹರಿಯುವ ಚರಂಡಿಗಳ ಅಕ್ಕಪಕ್ಕದಲ್ಲಿರುವ ಮನೆಗಳ ನಿವಾಸಿಗಳು ಕೂಡ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಷ್ಣುವರ್ಧನ್ ಹಾಗೂ ಸ್ಥಳೀಯರು ಇದ್ದರು.

About The Author

You May Also Like

More From Author

+ There are no comments

Add yours