ತುಮಕೂರು: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ

1 min read

 

ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ

Tumkurnews
ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಏಕಕಾಲದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಯನ್ನು ಪ್ರಾರಂಭಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಸಿದ್ಧತೆ ಕುರಿತು ಕೃಷಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ತುಮಕೂರು: ಜಿಲ್ಲೆಯಲ್ಲಿರುವ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ಪ್ರಕರಣಗಳೆಷ್ಟು? ಡಿಎಚ್ಒ ಮಾಹಿತಿ
ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು ಮಾಡಿರಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ಜಾಗದ ಅಭಾವವಿದ್ದಲ್ಲಿ ಗೋದಾಮು, ಗ್ರಾಮ ಪಂಚಾಯಿತಿ ಭವನಗಳಲ್ಲಿ ದಾಸ್ತಾನು ಮಾಡಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಬಾರದು. ಬೀಜ ಮತ್ತು ಗೊಬ್ಬರ ಕೊರತೆ ಉಂಟಾದರೆ ಸಂಬಂಧಿಸಿದ ತಾಲೂಕು ಕೃಷಿ ಸಹಾಯಕ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ತುಮಕೂರು: ಉತ್ತಮ ಮಳೆ: 3 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ
ಮುಂಗಾರು ಪೂರ್ವದಲ್ಲಿಯೇ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಮಾಡಿಕೊಂಡಲ್ಲಿ ರೈತರು ಬಿತ್ತನೆ ಕಾರ್ಯವನ್ನು ಸಕಾಲದಲ್ಲಿ ಕೈಗೊಳ್ಳಲು ಅನುಕೂಲವಾಗುತ್ತದೆ. ರೈತರಿಂದ ಯಾವುದೇ ದೂರುಗಳು ಬಾರದಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಾಗಬೇಕು. ಅಧಿಕೃತ ಮಾರಾಟಗಾರರಿಂದಲೇ ನಿಗದಿತ ದರದಲ್ಲಿ ಬೀಜ, ಗೊಬ್ಬರ ಖರೀದಿಸುವ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕೆಂದು ಸೂಚಿಸಿದರು.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕು ಕೃಷಿ ಸಹಾಯಕ ನಿರ್ದೇಶಕರಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು, ಬಿತ್ತನೆ ಪ್ರದೇಶದ ಗುರಿ, ಮಳೆ ವಿವರದ ತಾಲೂಕುವಾರು ಮಾಹಿತಿ ಪಡೆದರು.
ರೈತರಿಗೆ ಸಕಾಲದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಪೂರೈಕೆಯಾಗದಿದ್ದಲ್ಲಿ ಮುಕ್ತ ಮಾರುಕಟ್ಟೆಗೆ ಹೋಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಮೇ ಅಂತ್ಯದೊಳಗಾಗಿ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು ಮಾಡಲು ಕ್ರಮವಹಿಸಬೇಕೆಂದು ನಿರ್ದೇಶಿಸಿದರು.

ಹೇಮಾವತಿ ಕೆನಾಲ್ ಕಿಚ್ಚು: ಪೈಪ್ ತಂದ ಲಾರಿಗೆ ಅಡ್ಡ ಮಲಗಿ ಪ್ರತಿಭಟನೆ
ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ನಿಗದಿತ ದರದಲ್ಲಿಯೇ ವಿತರಿಸಬೇಕು. ವಿತರಣೆಯಲ್ಲಿ ಯಾವುದೇ ಗೊಂದಲಗಳುಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಿತ್ತನೆ ಬೀಜದ ದಾಸ್ತಾನು ಪ್ರಮಾಣವನ್ನು ಹಿಂದಿನ ಸಾಂಪ್ರದಾಯಿಕ ಪದ್ಧತಿ ಅನ್ವಯ ನಿಗದಿಪಡಿಸದೆ ರೈತ ಸಮುದಾಯವನ್ನು ಖುದ್ದಾಗಿ ಭೇಟಿ ಮಾಡಿ ವಾಸ್ತವವಾಗಿ ಅಗತ್ಯವಿರುವ ಬೀಜದ ಪ್ರಮಾಣವನ್ನು ನಿರ್ಧರಿಸಿ ದಾಸ್ತಾನು ಮಾಡಬೇಕು, ಜಿಲ್ಲೆಯ ಮುಖ್ಯ ಬೆಳೆಗಳಾದ ರಾಗಿ, ಶೇಂಗಾ ಬೆಳೆಯ ಬಿತ್ತನೆ ಬೀಜವನ್ನು ಬೇಡಿಕೆಗಿಂತ ಹೆಚ್ಚುವರಿ ಪ್ರಮಾಣದಲ್ಲಿ ದಾಸ್ತಾನು ಮಾಡಬೇಕೆಂದು ಸಲಹೆ ನೀಡಿದರು.

ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ: ಸಿಎಂ ಸಿದ್ದರಾಮಯ್ಯ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ ಜಿಲ್ಲಾ ಕೃಷಿ ಉಪ ನಿರ್ದೇಶಕ ಅಶೋಕ್, ಎಲ್ಲಾ ತಾಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

About The Author

You May Also Like

More From Author

+ There are no comments

Add yours