ತುಮಕೂರು: ಉತ್ತಮ ಮಳೆ: 3 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಗುರಿ
Tumkurnews
ತುಮಕೂರು: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಮುಖ ಬೆಳೆಗಳಾದ ಭತ್ತ, ಜೋಳ, ರಾಗಿ, ಸಿರಿಧಾನ್ಯ, ಮುಸುಕಿನ ಜೋಳ, ದ್ವಿದಳ ಧಾನ್ಯ, ಎಣ್ಣೆಕಾಳು, ವಾಣಿಜ್ಯ ಬೆಳೆ ಸೇರಿದಂತೆ 3,20,455 ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ತಿಳಿಸಿದರು.
ತುಮಕೂರು: ಕಳೆದ ಮೂರು ವರ್ಷಗಳ ಪೈಕಿ ಈ ವರ್ಷವೇ ದಾಖಲೆ ಮಳೆ! ಇಲ್ಲಿದೆ ವಿವರ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ನಡೆದ ಸಭೆಗೆ ಅವರು ಈ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 28,805 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 765.70 ಕ್ವಿಟಾಲ್ ಬಿತ್ತನೆ ಬೀಜವನ್ನು ಈಗಾಗಲೇ ದಾಸ್ತಾನು ಮಾಡಲಾಗಿದೆ. ಈಗಾಗಲೇ 106.45 ಕ್ವಿಂಟಾಲ್ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸಲಾಗಿದೆ. ವಿವಿಧ ಸರಬರಾಜು ಸಂಸ್ಥೆಗಳಲ್ಲಿ 52,217 ಕ್ವಿಂಟಾಲ್ ಬೀಜ ಲಭ್ಯವಿದ್ದು, ಬರುವ ಜೂನ್ 1ರೊಳಗಾಗಿ ಹಂತ ಹಂತವಾಗಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗುವುದು ಎಂದು ಸಭೆಗೆ ವಿವರಿಸಿದರು.
ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ, ಎಂಓಪಿ, ಎನ್‍ಪಿಕೆಎಸ್, ಎಸ್‍ಎಸ್‍ಪಿ ಸೇರಿದಂತೆ ಒಟ್ಟು 70,264 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 8,033 ಮೆ.ಟನ್ ರಸಗೊಬ್ಬರವನ್ನು ವಿತರಿಸಲಾಗಿದೆ. ಈವರೆಗೆ 50,160 ಮೆ.ಟನ್ ರಸಗೊಬ್ಬರ ವಿವಿಧ ಸಂಸ್ಥೆಗಳಿಂದ ಸರಬರಾಜಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ ಜಿಲ್ಲಾ ಕೃಷಿ ಉಪ ನಿರ್ದೇಶಕ ಅಶೋಕ್, ಎಲ್ಲಾ ತಾಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ತುಮಕೂರು: ಕಾರ್ಯಾರಂಭಕ್ಕೂ ಮುನ್ನವೇ ಹೊಸ ಬಸ್ ನಿಲ್ದಾಣದಲ್ಲಿ ಬಿರುಕು! ಅರೆಬರೆ ಆರಂಭಕ್ಕೆ ಸಿದ್ಧತೆ
+ There are no comments
Add yours