ತುಮಕೂರು: ಕಳೆದ ಮೂರು ವರ್ಷಗಳ ಪೈಕಿ ಈ ವರ್ಷವೇ ದಾಖಲೆ ಮಳೆ! ಇಲ್ಲಿದೆ ವಿವರ

1 min read

ತುಮಕೂರು: ಕಳೆದ ಮೂರು ವರ್ಷಗಳಲ್ಲೇ ಈ ಬಾರಿ ದಾಖಲೆ ಮಳೆ! ಇಲ್ಲಿದೆ ವಿವರ

Tumkurnews

ತುಮಕೂರು: ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.
ಹೌದು, ಈ ಕುರಿತು ಜಂಟಿ ಕೃಷಿ ನಿರ್ದೇಶಕ ರಮೇಶ್ ಮಾಹಿತಿ ನೀಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಇದೇ ಅವಧಿಯ ಮಳೆ ವರದಿಯನ್ನು ಅವಲೋಕಿಸಿದಾಗ 2021ರಲ್ಲಿ 164.5 ಮಿ.ಮೀ., 2022ರಲ್ಲಿ 126 ಮಿ.ಮೀ. ಹಾಗೂ 2023ರಲ್ಲಿ 139.7 ಮಿ.ಮೀ. ಸರಾಸರಿ ಮಳೆಯಾಗಿದ್ದು, 2024ರ ಮೇ ಮಾಹೆಯಲ್ಲಿ ಈವರೆಗೆ 193.8 ಮಿ.ಮೀ.ನಷ್ಟು ದಾಖಲೆ ಮಳೆಯಾಗಿದೆ.

ತುಮಕೂರು: ಮಳೆ ಅನಾಹುತ ತಡೆಯಲು ಅಲರ್ಟ್: ಸಹಾಯವಾಣಿ ಸ್ಥಾಪನೆ
ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ಉತ್ತಮ ಮಳೆಯಾಗಿದ್ದರೂ ಸಹ ಪೂರ್ವ ಮುಂಗಾರು ಬಿತ್ತನೆಗೆ ತಡವಾಗಿದೆ. ಕಳೆದ ಮಾರ್ಚ್, ಏಪ್ರಿಲ್ ಮಾಹೆಯಲ್ಲಿ ಮಳೆಯಾಗಿದ್ದರೆ ಸಕಾಲದಲ್ಲಿ ಪೂರ್ವ ಮುಂಗಾರು ಬಿತ್ತನೆ ಮಾಡಬಹುದಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಜೂನ್ 10ರ ನಂತರ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ರೈತರು ತಮ್ಮ ಜಮೀನನ್ನು ಹದಗೊಳಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಮೂರು ವರ್ಷಗಳ ಪೈಕಿ ಈ ವರ್ಷ ಉತ್ತಮ ಮಳೆಯಾಗಿರುವುದು
ರೈತರ ಮನದಲ್ಲಿ ಪ್ರಸಕ್ತ ವರ್ಷ ಉತ್ತಮ ಕೃಷಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಬಹುದೆಂಬ ಭರವಸೆಯನ್ನು ಮೂಡಿಸಿದೆ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಉತ್ತಮ ಮಳೆ: ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದ ಜಿಲ್ಲಾಡಳಿತ

About The Author

You May Also Like

More From Author

+ There are no comments

Add yours