ಗೃಹ ಸಚಿವ ಡಾ.ಜಿ ಪರಮೇಶ್ವರ್’ಗೆ ಜನರ ಬಗ್ಗೆ ಕಳಕಳಿ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಗೃಹ ಸಚಿವ ಡಾ.ಜಿ ಪರಮೇಶ್ವರ್’ಗೆ ಜಿಲ್ಲೆಯ ಜನರ ಬಗ್ಗೆ ಕಳಕಳಿ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ

Tumkurnews
ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಜಿಲ್ಲೆಯ ಜನರ ಬಗ್ಗೆ ಕಳಕಳಿ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು, ಜಿಲ್ಲೆಯ ಜನರ ಹಿತ ಕಾಪಾಡದೇ ಅಧಿಕಾರದಲ್ಲಿದ್ದರೆ ಏನೂ ಪ್ರಯೋಜನವಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಗುಡುಗಿದರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಗುಬ್ಬಿ ತಾಲ್ಲೂಕಿನ ಡಿ.ರಾಂಪುರದ ಹೇಮಾವತಿ ಶಾಖಾ ನಾಲೆ ಬಳಿ ನಡೆದ‌ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ
ಎಲ್ಲಾ ಪಕ್ಷದ ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಪ್ರಾರಂಭವಾಯಿತು. ನಂತರ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯೋಜನೆ ಸ್ಥಗಿತಗೊಳಿಸಿತ್ತು. ಮತ್ತೆ ಈಗ ಕಾಂಗ್ರೆಸ್ ಸರಕಾರ ಈ ಯೋಜನೆ ಜಾರಿಗೆ ತಂದಿದೆ ಎಂದು ಹರಿಹಾಯ್ದರು.
ಈ ಯೋಜನೆಗೆ ಗುದ್ದಲಿ ಪೂಜೆ ಮಾಡದೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಜಿಪಂ ಕೆಡಿಪಿ ಸಭೆಯಲ್ಲಿ ನಾವೆಲ್ಲಾ ಇದನ್ನು ವಿರೋಧಿಸಿದ್ದೇವೆ. ಆದರೆ ಜಿಲ್ಲೆಯಲ್ಲಿರುವ ಇಬ್ಬರು ಸಚಿವರು ಡಿ.ಕೆ. ಶಿವಕುಮಾರ್ ಅವರಿಗೆ ಹೆದರಿ ಸಚಿವ ಸಂಪುಟದಲ್ಲಿ ಈ ಯೋಜನೆಯನ್ನು ವಿರೋಧಿಸಿಲ್ಲ ಎಂದು ಟೀಕಿಸಿದರು.

ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ
ಕುಣಿಗಲ್ ಶಾಸಕ ಡಾ. ರಂಗನಾಥ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರಿಗೆ ಶಾಶ್ವತವಾಗಿ ಅಧಿಕಾರ ಕೊಡಿಸುವ ಸಲುವಾಗಿ ಈ ಯೋಜನೆ ಜಾರಿ ಮಾಡಲಾಗಿದೆ. ಷಡ್ಯಂತರ ಮಾಡಿ ಮಾಗಡಿಗೆ ನೀರು ತೆಗೆದುಕೊಂಡು ಹೋಗುವ ಕಾರ್ಯಕ್ಕೆ ಕೈ ಹಾಕಿದ್ದಾರೆ. ಏನೇ ಆಗಲಿ, ನಮ್ಮ ರಕ್ತ ಕೊಟ್ಟೇವು ಒಂದು ಹನಿ ನೀರನ್ನು ಮಾತ್ರ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ತುಮಕೂರು: ನಿವೇಶನ ರಹಿತರಿಗೆ ಶುಭ ಸುದ್ದಿ: ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ

About The Author

You May Also Like

More From Author

+ There are no comments

Add yours