ತುಮಕೂರು: ನಿವೇಶನ ರಹಿತರಿಗೆ ಶುಭ ಸುದ್ದಿ: ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ

1 min read

 

ಸ್ವಂತ ಸೂರು ಕಟ್ಟಿಕೊಳ್ಳಬೇಕು ಎಂದು ಕನಸು ಕಾಣುತ್ತಿರುವ ಜಿಲ್ಲೆಯ ಜನತೆಗೆ ಸಂತಸದ ಸುದ್ದಿ ಇದು!

ನಿವೇಶನ ರಹಿತರಿಗೆ ಸಂತಸದ ಸುದ್ದಿ: ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ

Tumkurnews
ತುಮಕೂರು: ಸ್ವಂತ ಸೂರು ಕಟ್ಟಿಕೊಳ್ಳಬೇಕು ಎಂದು ಕನಸು ಕಾಣುತ್ತಿರುವ ಜಿಲ್ಲೆಯ ಜನತೆಗೆ ಸಂತಸದ ಸುದ್ದಿ ಇದು!

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಶ್ರಮಿಸುತ್ತಿರುವ ಜಿಲ್ಲಾಡಳಿತವು‌ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಹೌದು, ಜಿಲ್ಲೆಯಲ್ಲಿ ಆಶ್ರಯ ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಈಗಾಗಲೇ ಜಿಲ್ಲೆಯಲ್ಲಿ 1728-19 ಎಕರೆ ಜಮೀನನ್ನು ಗುರುತಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯಿಂದ ಈ ಜಮೀನಿಗೆ ಮಂಜೂರಾತಿ ಆದೇಶವನ್ನು ನೀಡಲಾಗಿದ್ದು, 1199.19 ಎಕರೆ ಪ್ರದೇಶವನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ
ಹಸ್ತಾಂತರವಾದ ಜಮೀನನ್ನು ಬಡಾವಣೆಗಳನ್ನಾಗಿ ನಿರ್ಮಿಸಲು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಗರ ಯೋಜನಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಒಟ್ಟಿನಲ್ಲಿ ಜಿಲ್ಲೆಯ ಬಡ ಜನರ‌ ಸ್ವಂತ ಮನೆ ಕನಸು‌ ಆದಷ್ಟು ಬೇಗ ನನಸಾಗಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ.

ತುಮಕೂರಿನಲ್ಲಿ ಭರ್ಜರಿ ಮಳೆ: ವಿಡಿಯೋ

You May Also Like

More From Author

+ There are no comments

Add yours