ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ
Tumkurnews
ತುಮಕೂರು: ಜಿಲ್ಲೆಯಲ್ಲಿರುವ ಸಚಿವರುಗಳಾದ ಕೆ.ಎನ್.ರಾಜಣ್ಣ ಹಾಗೂ ಡಾ.ಜಿ.ಪರಮೇಶ್ವರ್ ಈ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಒತ್ತಾಯಿಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು?
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಜನ ತೀರ್ಮಾನಿಸಿದರೆ ಸರಕಾರ ಬರುತ್ತದೆ, ಹೋಗುತ್ತದೆ. ಆದ್ದರಿಂದ ಸರಕಾರ ಜನರಿಗೆ ಅನ್ಯಾಯ ಮಾಡಿದರೆ ಉಳಿವು ಸಾಧ್ಯವಿಲ್ಲ. ಈ ಯೋಜನೆಯ ಕಾಮಗಾರಿ ಕೈಗೊಳ್ಳಲು ಸರಕಾರದ ಆದೇಶ ಇಲ್ಲ. ಯಾವುದೇ ರೀತಿಯ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ಆದರೂ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ ಎಂದು ದೂರಿದರು.
ತುಮಕೂರು: ನಿವೇಶನ ರಹಿತರಿಗೆ ಶುಭ ಸುದ್ದಿ: ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ
ತುಮಕೂರು ಜಿಲ್ಲೆಯ ರೈತರು, ಜನರ ಹಿತ ಕಾಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲ, ನಮಗೆ ಅದು ಅಗತ್ಯವೂ ಇಲ್ಲ ಎಂದರು.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    
                


                                    
                                    
                                    
                                                        
                                
                        
+ There are no comments
Add yours