ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ಬಗ್ಗೆ ಬಿಗ್ ಅಪ್ಡೇಟ್! ಆಕಾಂಕ್ಷಿಗಳಿಗೆ ಶುಭ ಸುದ್ದಿ
Tumkurnews
ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸೊಗಡು ಶಿವಣ್ಣಗೆ ವಿಧಾನ ಪರಿಷತ್ ಸ್ಥಾನ?: ಮಹತ್ವದ ಬೆಳವಣಿಗೆ!
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದರು.
ತುಮಕೂರು: 25 ಸಾವಿರ ಬಂಡವಾಳ: ತಿಂಗಳಿಗೆ 3 ಲಕ್ಷ ಆದಾಯ!
ಒಟ್ಟಿನಲ್ಲಿ ನನೆಗುದಿ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದ್ದು, ಸದ್ಯದ ಮಟ್ಟಿಗೆ ಸಿಎಂ ಹೇಳಿಕೆ ಆಕಾಂಕ್ಷಿಗಳ ಆಸೆಗೆ ರೆಕ್ಕೆಪುಕ್ಕ ಮೂಡಿಸಿದೆ.
+ There are no comments
Add yours