ತುಮಕೂರಿಗೆ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು: ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನಾಳೆ ನಗರಕ್ಕೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಾರಾಯಣಸ್ವಾಮಿ ಪರ ಪ್ರಚಾರ

Tumkurnews
ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ ಅಭ್ಯರ್ಥಿ
ವೈ.ಎ.ನಾರಾಯಣಸ್ವಾಮಿ ಅವರ ಪರ ಶನಿವಾರ (ಮೇ 25) ನಗರದಲ್ಲಿ ಚುನಾವಣಾ ಪ್ರಚಾರ ಸಭೆ ನಿಗದಿಯಾಗಿದೆ ಎಂದು ಬಿಜೆಪಿ ತಿಳಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ನಗರದ ಶಿರಾ ರಸ್ತೆಯ ಸ್ನೇಹ ಸಂಗಮ ಸಹಕಾರ ಸಂಘದ ಸಭಾಂಗಣದಲ್ಲಿ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ.

ಸೊಗಡು‌ ಶಿವಣ್ಣಗೆ ವಿಧಾನ ಪರಿಷತ್ ಸ್ಥಾನ?: ಮಹತ್ವದ ಬೆಳವಣಿಗೆ!
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಎನ್.ಡಿ.ಎ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಬಂಡೆಪ್ಪ ಕಾಶಂಪೂರ, ಮಾಜಿ ಶಾಸಕರಾದ ಎಂ.ಪಿ.ನಾಡಗೌಡ, ಶಿವಶಂಕರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಕೆ.ಎಸ್.ನವೀನ್, ಮಾಜಿ ವಿಧಾನಪರಿಷತ್ ಸದಸ್ಯ ಚೌಡರೆಡ್ಡಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‌ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮೊದಲಾದವರು ಭಾಗವಹಿಸಲಿದ್ದಾರೆ.

About The Author

You May Also Like

More From Author

+ There are no comments

Add yours