ಮಧುಗಿರಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸಾವು

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

ಮಹಿಳೆ ಸಾವು: ಇಬ್ಬರ ಸ್ಥಿತಿ ಗಂಭೀರ

Tumkurnews
ಮಧುಗಿರಿ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಧುಗಿರಿ ತಾಲ್ಲೂಕು ಪುರವರ ಗ್ರಾಮದ ಹೊರವಲಯದ ಜಯಮಂಗಲಿ ನದಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಪುರವರ ಹೋಬಳಿಯ ಕೃಷ್ಣಯ್ಯಪಾಳ್ಯದಿಂದ ಜೋಗೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ತಾಯಿ ಮತ್ತು ಮಗ ಹಾಗೂ ಕೊಡಿಗೇನಹಳ್ಳಿಯಿಂದ ಮಧುಗಿರಿಗೆ ತೆರಳುತಿದ್ದ ಇಬ್ಬರು ಸ್ನೇಹಿತರಿದ್ದ ದ್ವಿಚಕ್ರವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
ಅಪಘಾತದ ರಭಸಕ್ಕೆ ಜೋಗೇನಹಳ್ಳಿ ಗ್ರಾಮದ ಹನುಮಕ್ಕ (45) ಸ್ಥಳದಲ್ಲೇ ಮೃತಪಟ್ಟಿದ್ದು, ಈಕೆಯ 25 ವರ್ಷದ ಪುತ್ರನಿಗೆ ಗಂಭೀರ ಗಾಯಗಳಾಗಿವೆ.
ಮತ್ತೊಂದು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತಿದ್ದ ಉಪ್ಪಾರಹಳ್ಳಿ ಗ್ರಾಮದ ಹನುಮಂತ ರೆಡ್ಡಿ (65) ಗಂಗಾಧರಪ್ಪ (67) ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕೊಡಿಗೇನಹಳ್ಳಿ ಪಿಎಸೈ ಮೆಹಬೂಬ್ ಖಾನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ

About The Author

You May Also Like

More From Author

+ There are no comments

Add yours