ತುಮಕೂರು: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನ ಚಲೋ

1 min read

 

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನ ಚಲೋ

Tumkurnews
ತುಮಕೂರು: ಹಾಸನದ ಪೆನ್‍ಡ್ರೈವ್ ಲೈಂಗಿಕ ಹತ್ಯಾಕಾಂಡದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಒತ್ತಾಯಿಸಿ ಹಾಗೂ ಸಂತ್ರಸ್ಥ ಮಹಿಳೆಯರಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮೇ 30ರಂದು ಹಾಸನ ಚಲೋ ಅಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ತಿಳಿಸಿದೆ.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಇಂದಿರಮ್ಮ, ಘಟನೆ ನಡೆದು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೆನ್‍ಡ್ರೈವ್‍ನನ್ನು ಹಾದಿ ಬೀದಿಯಲ್ಲಿ ಹಂಚಿದವರನ್ನು ಬಂಧಿಸಿಲ್ಲ, ಜಾತಿಯ ಕಾರಣಕ್ಕೆ ಸಂತ್ರಸ್ಥ ಮಹಿಳೆಯರು ಕೌಟುಂಬಿಕ ಮರ್ಯಾದೆ ಮತ್ತಿತರರ ಕಾರಣಗಳಿಂದ ಎಸ್.ಐ.ಟಿ ಮುಂದೆ ದೂರು ನೀಡಲು ಮುಂದೆ ಬರುತ್ತಿಲ್ಲ. ಈಗ ದೂರು ನೀಡಿದವರಿಗೂ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡಿಲ್ಲ. ಕಾನೂನು ಸುವ್ಯವಸ್ಥೆಯ ಜೊತೆಗೆ, ಹೆಣ್ಣು ಮಕ್ಕಳ ಘನತೆ, ಗೌರವ ಕಾಪಾಡುವಲ್ಲಿಯೂ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ತುಮಕೂರು: ಈ ಶಾಲೆಗಳು ಅನಧಿಕೃತ: ಮಕ್ಕಳನ್ನು ಸೇರಿಸುವ ಮುನ್ನ ಇರಲಿ ಎಚ್ಚರ
ಮುಖ್ಯಮಂತ್ರಿ ಹಾಗೂ ಗೃಹಸಚಿವರು ಕೂಡಲೇ ಸಂತ್ರಸ್ಥರ ಮಹಿಳೆಯರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬವ ಕೆಲಸ ಮಾಡಬೇಕಿತ್ತು. ಆದರೆ ಇದುವರೆಗೂ ಅದು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದರು.

About The Author

You May Also Like

More From Author

+ There are no comments

Add yours