ತುಮಕೂರು: ಅನಧಿಕೃತ ಶಾಲೆಗಳ ರದ್ದತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಅನಧಿಕೃತ ಶಾಲೆಗಳ ರದ್ದತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Tumkurnews
ತುಮಕೂರು: ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಅನಧಿಕೃತ ಶಾಲೆಗಳ ಅನುಮತಿ ರದ್ದತಿಗೆ ಆಗ್ರಹಿಸಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಉಪವಾಸ ಸತ್ಯಾಗ್ರಹವನ್ನು ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಮೇ 27 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.

ತುಮಕೂರು: ಈ ಶಾಲೆಗಳು ಅನಧಿಕೃತ: ಮಕ್ಕಳನ್ನು ಸೇರಿಸುವ ಮುನ್ನ ಇರಲಿ ಎಚ್ಚರ
ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಬೇರು ಬಿಟ್ಟಿರುವ ಅನಧಿಕೃತ ಶಾಲೆಗಳ ರದ್ದತಿಗೆ ಮೀನಾಮೇಷ ಎಣಿಸುತ್ತಿರುವ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ ಈ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ತಿಳಿಸಿದ್ದಾರೆ.
ಮಾನ್ಯತೆ ನವೀಕರಣ ಪಡೆಯದ, ಶಾಲೆ ಸ್ಥಳಾಂತರಕ್ಕೆ ಅನುಮತಿ ಪಡೆಯದ ತುಮಕೂರು ತಾಲ್ಲೂಕಿನ 14 ಶಾಲೆಗಳು ಸೇರಿದಂತೆ ತುಮಕೂರು ಮತ್ತು ಮಧುಗಿರಿ ಎರಡೂ ಶೈಕ್ಷಣಿಕ ಜಿಲ್ಲೆಯಲ್ಲಿರುವ ಅನಧಿಕೃತ ಶಾಲೆಗಳ ಅನುಮತಿ ರದ್ದುಪಡಿಸಬೇಕು. ಶಿಕ್ಷಣ ಇಲಾಖೆಯಿಂದ ದಪ್ಪ ಅಕ್ಷರಗಳಲ್ಲಿ ಆಯಾ ಶಾಲೆಗಳ ಮುಂದೆ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವವರ ಮೇಲೆ ಕ್ರಮ ಆಗುವವರೆಗೂ ಹಾಗೂ ಉಲ್ಲಂಘನೆಗಳನ್ನು ತಡೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತಿರುವುದಾಗಿ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

About The Author

You May Also Like

More From Author

+ There are no comments

Add yours