ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ‌.ಎನ್ ರಾಜಣ್ಣ!

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ‌.ಎನ್ ರಾಜಣ್ಣ!

Tumkurnews
ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಸಚಿವ ಕೆ.ಎನ್ ರಾಜಣ್ಣ ಅವರ ರಾಜೀನಾಮೆಗೆ ವ್ಯಾಪಕವಾದ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ‘ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧ’ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ!

ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿಗೆ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಹೇಮಾವತಿ ನೀರನ್ನು ಪೈಪ್’ಲೈನ್’ನಲ್ಲಿ ತೆಗೆದುಕೊಂಡು ಹೋಗುವ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗೆ ತುಮಕೂರು ಜಿಲ್ಲೆಯಲ್ಲಿ ವ್ಯಾಪಕವಾದ ವಿರೋಧ ವ್ಯಕ್ತವಾಗಿದೆ.

ಸಚಿವರುಗಳಾದ ಕೆ.ಎನ್ ರಾಜಣ್ಣ ಹಾಗೂ ಡಾ.ಜಿ ಪರಮೇಶ್ವರ್ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ತಡೆಯುವಲ್ಲಿ ಜಿಲ್ಲೆಯ ಇಬ್ಬರು ಸಚಿವರು ವಿಫಲರಾಗಿದ್ದಾರೆ. ಹಾಗಾಗಿ ಈ ಇಬ್ಬರೂ ರಾಜೀನಾಮೆ ನೀಡಬೇಕು ಎಂದು ಜಿಲ್ಲೆಯ ಶಾಸಕರುಗಳಾದ ಎಂ.ಟಿ ಕೃಷ್ಣಪ್ಪ, ಬಿ.ಸುರೇಶ್ ಗೌಡ ಹಾಗೂ ಮಾಜಿ ಸಚಿವ ಸೊಗಡು‌ ಶಿವಣ್ಣ ಆದಿಯಾಗಿ ರೈತರು ಆಗ್ರಹಿಸಿದ್ದು, ಹೋರಾಟ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು‌?
ಸಚಿವ ಸ್ಥಾನ ಬಿಡುವೆ: ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ. ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ಸನ್ನಿವೇಶ ಸೃಷ್ಟಿಯಾದರೆ ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ. ನನಗೆ ಪಕ್ಷದ ಜವಬ್ದಾರಿ ನೀಡಲಿ ಎಂದು ತಿಳಿಸಿದ್ದಾರೆ.

ತುಮಕೂರು: ಸರ್ವರ್ ಹ್ಯಾಕ್ ಮಾಡಿ 34 ಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು: ಬಂಧನ
ಸಚಿವ ರಾಜಣ್ಣ ಈ ಹಿಂದೆಯೂ ಹಲವು ಬಾರಿ ಚುನಾವಣೆ ನಿವೃತ್ತಿ ಬಗ್ಗೆ ಮಾತನಾಡಿದ್ದರು.‌ ಸದ್ಯ ಅವರು ಮಧುಗಿರಿ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಅವರ ಪುತ್ರ ರಾಜೇಂದ್ರ ರಾಜಣ್ಣ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ‌.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ

About The Author

You May Also Like

More From Author

+ There are no comments

Add yours