ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧ: ಪರಮೇಶ್ವರ್ ನಿವಾಸದೆದುರು ಪ್ರತಿಭಟನೆಗೆ ನಿರ್ಧಾರ
Tumkurnews
ತುಮಕೂರು: ಜಿಲ್ಲೆಗೆ ಹಂಚಿಕೆಯಾಗಿರುವ ನೀರನ್ನು ಏಕ್ಸ್’ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಮತ್ತಿತರ ಕಡೆಗೆ ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಸರಕಾರ ಮಧ್ಯ ಪ್ರವೇಶಿಸಿ ಎರಡು ಜಿಲ್ಲೆಯ ಜನರ ನಡುವೆ ಉಂಟಾಗಿರುವ ಗೊಂದಲ ಬಗೆಹರಿಸಬೇಕು ಎಂದು ಒತ್ತಾಯಿಸಿ ಮೇ 30ರಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ.ಎನ್ ರಾಜಣ್ಣ!
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಕುಣಿಗಲ್‍ಗೆ ಹಂಚಿಕೆಯಾಗಿರುವ ನೀರನ್ನು ತೆಗೆದುಕೊಂಡು ಹೋಗಲು ಈಗಾಗಲೇ ತಯಾರಾಗಿದ್ದ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೆ ಎತ್ತಿನ ಹೊಳೆ ಯೋಜನೆಯಿಂದ ಕೊರಟಗೆರೆ ತಾಲೂಕು ಎಲೆರಾಂಪುರದಿಂದ 1.8 ಟಿ.ಎಂ.ಸಿ ನೀರು ತೆಗೆದುಕೊಂಡು ಹೋಗಲು ಪಂಪ್ ಹೌಸ್ ಸಹ ನಿರ್ಮಾಣಗೊಂಡಿದೆ. ಹೀಗಿದ್ದು, ಸಾವಿರಾರು ಕೋಟಿ ರೂ. ದುಂದುವೆಚ್ಚ ಮಾಡಿ, ಪೈಪ್ ಲೈನ್ ಮೂಲಕ ನೀರು ತೆಗೆದು ಕೊಂಡು ಹೋಗುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್‍ನ ಮೂಲ ನಕ್ಷೆಯನ್ನು ಮುಚ್ಚಿಟ್ಟು, ಪ್ರಭಾವಿ ಮಂತ್ರಿಗಳಿಗೆ ಹೆದರಿ ನೀರಾವರಿ ಇಲಾಖೆ ಹಾಲಿ ಇರುವ ನಾಲೆಯ ಮಟ್ಟಕ್ಕಿಂತ 15 ಅಡಿ ಆಳದಲ್ಲಿ ಜಾಕ್‍ವೆಲ್ ನಿರ್ಮಿಸಲು ಹೊರಟಿದೆ. ಅತಿ ಆಳದಲ್ಲಿರುವ ಚಾಕ್‍ವೆಲ್‍ನಿಂದ ಹೆಚ್ಚು ನೀರು ಹರಿಯುವ ಪರಿಣಾಮ, ಹೇಮಾವತಿ ನಾಲೆಯ 70 ಕಿ.ಮಿ.ಗಿಂತ ಮುಂದೆ ಇರುವ ಊರುಗಳಿಗೆ ನೀರಿನ ಕೊರತೆ ಉಂಟಾಗಲಿದೆ ಎಂದರು.
ತುಮಕೂರು: ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ ರಾಜೀನಾಮೆ ನೀಡಲಿ
ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಯನ್ನು ರದ್ದು ಪಡಿಸುವವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಮೇ.30 ರಂದು ಜಿಲ್ಲೆಯ ಎಲ್ಲಾ ಶಾಸಕರು, ವಿರೋಧಪಕ್ಷದ ನಾಯಕರುಗಳು, ರೈತರು ಸೇರಿ ಉಸ್ತುವಾರಿ ಸಚಿವರ ಗೊಲ್ಲಹಳ್ಳಿ ಮನೆಯ ಮುಂದೆ ಪ್ರತಿಭಟನಾ ಧರಣಿ ನಡೆಸುತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ತುಮಕೂರು: ಜಿಲ್ಲೆಗೆ ಸರ್ಕಾರದಿಂದ ಮತ್ತೊಂದು ಮರ್ಮಾಘಾತ: ಎತ್ತಿನಹೊಳೆ ನೀರಿಗೂ ಕನ್ನ!
ಬಿಜೆಪಿ ಮುಖಂಡ ದಿಲೀಪ್, ಪಂಚಾಕ್ಷರಯ್ಯ, ಬೆಟ್ಟಸ್ವಾಮಿ, ತಿಪಟೂರಿನ ಎಂ.ಪಿ.ಪ್ರಸನ್ನಕುಮಾರ್, ಭೂ ರಾಮಣ್ಣ, ಸೌಮ್ಯ, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧದ ಕಹಳೆ: ತುಮಕೂರಿನಲ್ಲಿ ಹೋರಾಟ ಆರಂಭ
+ There are no comments
Add yours