ಮಳೆ ಹಾನಿ ಪರಿಹಾರ ಮೊತ್ತ ಶೀಘ್ರ ಪಾವತಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
Tumkurnews
ತುಮಕೂರು: ಮಳೆಯಿಂದ ಆದ ಗೃಹ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ಸೋಮವಾರ ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆ’ಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಒಂದು ವಾರದಿಂದ ಜಿಲ್ಲಾದ್ಯಂತ ಆಗಿರುವ ಮುಂಗಾರು ಮಳೆಯ ಪ್ರಮಾಣ, ಮಳೆಯಿಂದ ಆದ ಗೃಹ ಹಾನಿ, ಜಾನುವಾರುಗಳ ಸಾವು, ಕುಡಿಯುವ ನೀರು ನಿರ್ವಹಣೆ, ಬರ ನಿರ್ವಹಣೆ ಹಾಗೂ ಕಳೆದ ವಾರ ಮುಖ್ಯಮಂತ್ರಿಗಳು ನೀಡಲಾದ ಸೂಚನೆಗಳನ್ವಯ ಜಿಲ್ಲೆಯಾದ್ಯಂತ ಕೈಗೊಂಡ ಕ್ರಮಗಳು ಸೇರಿದಂತೆ ಮೊದಲಾದ ವಿಷಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಶಿರಾಗೇಟ್ ರಸ್ತೆ ಸಂಚಾರ ಮುಕ್ತ
ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಾತನಾಡಿ, ಕಳೆದ ಶನಿವಾರ ಸುರಿದ ಮಳೆಗೆ ತಾಲ್ಲೂಕಿನಾದ್ಯಂತ 4 ಮನೆಗಳು ಹಾನಿಗೊಳಗಾಗಿದ್ದು, ಪರಿಹಾರ ಪಾವತಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಶಿರಾ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ವಾಡಿಕೆಯಂತೆ 70 ಮಿ.ಮೀ. ಮಳೆಯಾಗಬೇಕಿದ್ದು, ಪ್ರಸ್ತುತದವರೆಗೂ 120 ಮಿ.ಮೀ. ಮಳೆಯಾದ ಕಾರಣ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ ಎಂದರು. 630 ಕ್ವಿಂಟಾಲ್ ಶೇಂಗಾ ಬೀಜ ದಾಸ್ತಾನಿದ್ದು, ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲಾಗುತ್ತಿದೆ ಎಂದರು.
ಮಳೆಯಿಂದ ಆದ ಹಾನಿಗೆ ಸಂಬಂಧಿಸಿದ ಹಾಗೂ ಬರ ಪರಿಹಾರಗಳು ರೈತರಿಗೆ ಪಾವತಿಯಾಗಿರುವ ಬಗ್ಗೆ ಅಧಿಕಾರಿಗಳು ಖಚಿತಪಡಿಸಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪಿಎಂ ಕುಸುಮ್ ಯೋಜನೆಗಾಗಿ 70 ಎಕರೆ ಭೂಮಿ ಸರ್ವೇ ಮಾಡಿ ವರದಿ ಕಳುಹಿಸುವಂತೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್’ಗೆ ಸೂಚಿಸಿದರು.
ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
+ There are no comments
Add yours