ತುಮಕೂರು: ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ: ಡಿಸಿ ಶುಭ ಕಲ್ಯಾಣ್

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ: ಡಿಸಿ ಶುಭ ಕಲ್ಯಾಣ್

Tumkurnews
ತುಮಕೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ನಗರದ ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ಮತ ಎಣಿಕೆ ನಡೆಯಲಿದ್ದು, ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ ಒದಗಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಎನ್‍ಐಸಿ ಕಚೇರಿಯಲ್ಲಿ ನವದೆಹಲಿಯ ಭಾರತ ಚುನಾವಣಾ ಆಯೋಗದಿಂದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಪತ್ರಿಕಾ ಹೇಳಿಕೆ ನೀಡಿದರು.
ಎಣಿಕೆ ಪ್ರಕ್ರಿಯೆಯನ್ನು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಣಿಕಾ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯ ಪರಿಧಿಯಲ್ಲಿ ವಾಹನಗಳನ್ನು ನಿರ್ಬಂಧಿಸಿ ಪಾದಚಾರಿ ವಲಯವೆಂದು ಗುರುತಿಸಿ ಮೊದಲ ಸುತ್ತಿನ ಭದ್ರತೆ ಒದಗಿಸಲಾಗುವುದು.

ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ‌.ಎನ್ ರಾಜಣ್ಣ!
ಎರಡನೇ ಸುತ್ತಿನಲ್ಲಿ ರಾಜ್ಯ ಪೊಲೀಸ್ ಹಾಗೂ ಮೂರನೇ ಸುತ್ತಿನಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಿಂದ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು.
ಮತ ಎಣಿಕಾ ಸಿಬ್ಬಂದಿ, ಎಣಿಕಾ ಏಜೆಂಟ್, ಅಭ್ಯರ್ಥಿಗಳು ಸೇರಿದಂತೆ ಯಾರಿಗೂ ಎಣಿಕಾ ಕೇಂದ್ರದೊಳಗೆ ಮೊಬೈಲ್ ತರಲು ಅವಕಾಶವಿರುವುದಿಲ್ಲ. ಮೊಬೈಲ್‍ಗಳನ್ನು ಸುರಕ್ಷಿತವಾಗಿಡಲು ಎಣಿಕಾ ಕೇಂದ್ರದ ಆವರಣದಲ್ಲಿ ಮೊಬೈಲ್ ಡೆಪಾಸಿಟ್ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, ಸಂಬಂಧಿಸಿದವರು ಎಣಿಕಾ ಕೇಂದ್ರದೊಳಗೆ ಬರುವ ಮುನ್ನ ತಮ್ಮ ಮೊಬೈಲ್‍ಗಳನ್ನು ಈ ಡೆಪಾಸಿಟ್ ಕೇಂದ್ರದಲ್ಲಿಡಬೇಕು ಎಂದರು.

ತುಮಕೂರು: ಚೆನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್: ರೈತರಿಂದ ಅರ್ಜಿ ಸ್ವೀಕಾರ
ಮಹಿಳೆ ಹಾಗೂ ಪುರುಷರನ್ನು ತಪಾಸಣೆ ಮಾಡಲು ಪ್ರತ್ಯೇಕವಾಗಿ ಮಹಿಳಾ ಹಾಗೂ ಪುರುಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕಾ ದಿನದಂದು ಭದ್ರತಾ ಕೊಠಡಿಯಿಂದ ಎಣಿಕಾ ಕೇಂದ್ರದೊಳಗೆ  ವಿದ್ಯುನ್ಮಾನ ಮತ ಯಂತ್ರಗಳನ್ನು ಸಾಗಿಸುವ ಪೂರ್ಣ ಪ್ರಕ್ರಿಯೆಯನ್ನು ನಿಗಾವಹಿಸಲು 360 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ತುಮಕೂರು: ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧ: ಪರಮೇಶ್ವರ್ ನಿವಾಸದೆದುರು ಪ್ರತಿಭಟನೆಗೆ ನಿರ್ಧಾರ
ತುಮಕೂರು ಲೋಕಸಭಾ ಕ್ಷೇತ್ರದ ಒಟ್ಟು 1846 ಮತಗಟ್ಟೆಗಳ ಮತಗಳ ಎಣಿಕೆಗಾಗಿ 12 ಎಣಿಕಾ ಕೊಠಡಿ ಹಾಗೂ 121 ಎಣಿಕಾ ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮತ ಎಣಿಕಾ ಕೊಠಡಿಗಳಲ್ಲಿಯೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಹಾಯಕ ಚುನಾವಣಾಧಿಕಾರಿಗಳು, ಎಣಿಕಾ ಸಹಾಯಕರು, ಸೂಕ್ಷ್ಮ ವೀಕ್ಷಕರು ಹಾಗೂ ಎಣಿಕಾ ಮೇಲ್ವಿಚಾರಕರಿಗೆ ಈಗಾಗಲೇ ಮೊದಲ ಹಂತದ ತರಬೇತಿ ನೀಡಲಾಗಿದ್ದು, ಜೂನ್ 1ರಂದು ಎರಡನೇ ಹಂತದ ಎಣಿಕಾ ತರಬೇತಿ ನೀಡಲಾಗುವುದು. ಜಿಲ್ಲೆಯಲ್ಲಿ ಎರಡು ಮತ ಎಣಿಕಾ ಕೇಂದ್ರಗಳಿರುವುದರಿಂದ ಚುನಾವಣಾ ಆಯೋಗವು ಇಬ್ಬರು ಎಣಿಕಾ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಮಾಹಿತಿ ನೀಡಿದರು.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ
ಮತ ಎಣಿಕೆ ಕಾರ್ಯಕ್ಕೆ ಜೂನ್ 1ರೊಳಗಾಗಿ ಎಣಿಕಾ ಏಜೆಂಟರ್‍’ಗಳನ್ನು ನೇಮಕ ಮಾಡಿ ವರದಿ ಸಲ್ಲಿಸಲು ಈಗಾಗಲೇ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟ್‍ಗಳಿಗೆ ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಶೀಲ್ದಾರ್ ರೇಷ್ಮ, ಟೂಡಾ ಆಯುಕ್ತ ಬಸಂತಿ ಸೇರಿದಂತೆ ಮತ್ತಿತರರಿದ್ದರು.

 

About The Author

You May Also Like

More From Author

+ There are no comments

Add yours