ಸಿದ್ಧಗಂಗಾ ಮಠಕ್ಕೆ ಬಿಜೆಪಿ ಅಭ್ಯರ್ಥಿಗಳ ಭೇಟಿ
Tumkurnews
ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಗೌಡ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು.
ತುಮಕೂರು: ಬೀದಿಗಿಳಿದ ರೈತರು: ಪರಮೇಶ್ವರ್, ರಾಜಣ್ಣ ವಿರುದ್ಧ ತೀವ್ರ ಆಕ್ರೋಶ
ಹಿರಿಯ ಶ್ರೀ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಹಿರಿಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ವ್ಯವಸ್ಥೆ ಬಹಳ ಹದಗೆಟ್ಟಿದೆ. ಶಿಕ್ಷಕರು ಆತಂಕದಲ್ಲಿ ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಶಿಕ್ಷಣ ವೃತ್ತಿ ಪಾವಿತ್ರ್ಯತೆ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ತುಮಕೂರು: ಅನಧಿಕೃತ ಶಾಲೆಗಳ ವಿರುದ್ಧ ಪ್ರತಿಭಟನೆಗೆ ಅಡ್ಡಿಪಡಿಸಿದ ರೂಪ್ಸಾ!
ಜೂ.3 ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ್ತೊಮ್ಮೆ ಶಿಕ್ಷಕರು ನನ್ನನ್ನು ಬೆಂಬಲಿಸುವ ಮೂಲಕ ಗೆಲ್ಲಿಸುವ ವಿಶ್ವಾಸವಿದೆ. ನಾನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾದ ಬಳಿಕ ಶಿಕ್ಷಕರು ನೆಮ್ಮದಿಯಿಂದ ಕಾರ್ಯನಿರ್ವಹಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರ 7 ವೇತನ ಆಯೋಗದ ವರದಿ ಜಾರಿ, ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿ, ಶಿಕ್ಷಕರಿಗೆ ಆರೋಗ್ಯ ಕಾರ್ಡ್ ಒದಗಿಸುವ ಕಾರ್ಯ ಮಾಡುವ ಗುರಿ ಹೊಂದಿದ್ದೇನೆ ಎಂದರು.
ಕಾಂಗ್ರೆಸ್‍ನವರು ಏನೇ ಆಸೆ, ಆಮೀಷವೊಡ್ಡಿದರೂ, ಏನೇ ಕುತಂತ್ರ ಮಾಡಿದರೂ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲ್ಲಲ್ಲು ಸಾಧ್ಯವಿಲ್ಲ. ಈ ಕ್ಷೇತ್ರದ 5 ಜಿಲ್ಲೆಗಳ 34 ತಾಲ್ಲೂಕುಗಳಲ್ಲೂ ವಾತಾವರಣ ನಮ್ಮ ಪರ ಇದೆ. ನೂರಕ್ಕೆ ನೂರು ಪಾಲು ಗೆಲ್ಲುವ ವಿಶ್ವಾಸವಿದೆ. ಈ ಚುನಾವಣೆಯಲ್ಲಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಶಿರಾಗೇಟ್ ರಸ್ತೆ ಸಂಚಾರ ಮುಕ್ತ
ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುವ ಮೂಲಕ ಶಿಕ್ಷಕರೇ ಗೆಲ್ಲಲಿದ್ದಾರೆ. ಈ ಮೂಲಕ ಒಳ್ಳೆಯ ಸಮಾಜ ಕಟ್ಟಲು ಶಿಕ್ಷಕರು ಅನುವು ಮಾಡಿಕೊಡಬೇಕು. ಕ್ಷೇತ್ರದಲ್ಲಿ ಸಂಚರಿಸಿದಾಗ ಶಿಕ್ಷಕರು ನಮ್ಮ ಸೇವೆಯನ್ನು ಪ್ರೀತಿಯಿಂದ ಸ್ವೀಕಾರ ಮಾಡಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸುವ ಮಾತುಗಳನ್ನಾಡುತ್ತಿದ್ದಾರೆ. ಹಾಗಾಗಿ ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸತ್ತುಹೋಗಿದೆ: ನಾಲಾಯಕ್ ಶಿಕ್ಷಣ ಮಂತ್ರಿ
ನಾನು ಕಳೆದ 20 ವರ್ಷಗಳಿಂದಲೂ ಸಿದ್ದಗಂಗಾ ಮಠ ಭಕ್ತನಾಗಿದ್ದೇನೆ. ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರ ಆಶೀರ್ವಾದ ಪಡೆದಿದ್ದೇನೆ. ಸಿದ್ದಗಂಗಾ ಸಂಸ್ಥೆಗಳ ಕೆಲಸ ಕಾರ್ಯಗಳನ್ನು ಚಾಚೂತಪ್ಪದೇ ಮಾಡುತ್ತಾ ಸಾಗುತ್ತಿದ್ದೇನೆ. ನನಗೆ ಗುರುಗಳ ಆಶೀರ್ವಾದ ಸಿಕ್ಕಿದೆ ಎಂದರು.
ಶಾಸಕ ಜ್ಯೋತಿಗಣೇಶ್ ಮಾತನಾಡಿ, ಈಗಾಗಲೇ ಶಿಕ್ಷಕರ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವ ವೈ.ಎ ನಾರಾಯಣಸ್ವಾಮಿ ಅವರನ್ನು ಜೂ.3 ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಶೆಟ್ಟಿಹಳ್ಳಿ ಗೇಟ್ ಅಂಡರ್ ಪಾಸ್ ಬಳಿ ಪಾದಚಾರಿ ಮಾರ್ಗ: ಶಾಸಕ ಜ್ಯೋತಿಗಣೇಶ್ ಭರವಸೆ
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ನಿವಾರಣೆಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೂ ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಆಗಿದೆ ಎಂದರು.
ಸ್ವತಃ ಇಂಜಿನಿಯರಿಂಗ್ ಕಾಲೇಜಿನ ಫ್ರೊಫೆಸರ್ ಆಗಿ ಕಾರ್ಯನಿರ್ವಹಿಸಿದ್ದ ವೈ.ಎ. ನಾರಾಯಣಸ್ವಾಮಿಯವರಿಗೆ ಶಿಕ್ಷಕರ ನೈಜ ಸಮಸ್ಯೆಗಳ ಅರಿವಿದೆ. ಹಾಗಾಗಿ ಅವರು ಸದಾ ಶಿಕ್ಷಕರ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಮ್ಮೆ ಅವರಿಗೆ ಶಿಕ್ಷಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ, ಕೆ.ಎಸ್. ಉಮಾಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ಸೊಗಡು ಶಿವಣ್ಣಗೆ ವಿಧಾನ ಪರಿಷತ್ ಸ್ಥಾನ?: ಮಹತ್ವದ ಬೆಳವಣಿಗೆ!
+ There are no comments
Add yours