ತುಮಕೂರು: ಅನಧಿಕೃತ ಶಾಲೆಗಳ ವಿರುದ್ಧ ಪ್ರತಿಭಟನೆಗೆ ಅಡ್ಡಿಪಡಿಸಿದ ರೂಪ್ಸಾ!

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಅನಧಿಕೃತ ಶಾಲೆಗಳ ವಿರುದ್ಧ ಪ್ರತಿಭಟನೆಗೆ ಅಡ್ಡಿಪಡಿಸಿದ ರೂಪ್ಸಾ!

Tumkurnews
ತುಮಕೂರು: ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೊಲೆಯಂತೆ ಜಿಲ್ಲೆಯ ಮಧುಗಿರಿ ಮತ್ತು ತುಮಕೂರು ಶೈಕ್ಷಣಿಕ ಜಿಲ್ಲೆಗಳಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಸೇವಾ ಕೇಂದ್ರ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದ ವೇಳೆ, ಇದನ್ನು ವಿರೋಧಿಸಿ ರೂಪ್ಸಾ ಕರ್ನಾಟಕ ಹಮ್ಮಿಕೊಂಡಿದ್ದ ಪ್ರತಿಭಟನೆಗಳು ಏಕ ಕಾಲಕ್ಕೆ ನಡೆದು, ಎರಡು ಸಂಘಟನೆಗಳ ಸದಸ್ಯರ ನಡುವೆ ಮಾತಿನ ಚಕಮುಖಿ ನಡೆದ ಘಟನೆ ಇಂದು ನಡೆದಿದೆ.

ತುಮಕೂರು: ಈ ಶಾಲೆಗಳು ಅನಧಿಕೃತ: ಮಕ್ಕಳನ್ನು ಸೇರಿಸುವ ಮುನ್ನ ಇರಲಿ ಎಚ್ಚರ
ತುಮಕೂರು ತಾಲೂಕು ಬಿಇಓ ಅವರು ತಾಲೂಕಿನ 14 ಶಾಲೆಗಳನ್ನು ಅನಧಿಕೃತ ಎಂದು ನೊಟೀಸ್ ನೀಡಿ, ಒಂದು ತಿಂಗಳು ಕಳೆದರೂ ಶಾಲೆಗಳ ವಿರುದ್ದ ಯಾವುದೇ ಕ್ರಮಕೈಗೊಂಡಿಲ್ಲ. ಕೂಡಲೇ ಅನಧಿಕೃತ ಶಾಲೆಗಳ ಮಾನ್ಯತೆ ರದ್ದುಪಡಿಸಿ, ಮಕ್ಕಳ ಪ್ರವೇಶವನ್ನು ತಡೆಯಬೇಕೆಂದು ಆಗ್ರಹಿಸಿ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಅವರ ನೇತೃತ್ವದಲ್ಲಿ ಧರಣಿ ಹಮ್ಮಿಕೊಳ್ಳಲಾಗಿತ್ತು.

ಶಿರಾಗೇಟ್ ರಸ್ತೆ ಸಂಚಾರ ಮುಕ್ತ
ಮಾನವ ಹಕ್ಕುಗಳ ಸೇವಾ ಕೇಂದ್ರ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಸರಿಯಲ್ಲ. ಕೇವಲ ಪ್ರಚಾರಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಮ್ಯಾನೇಜ್‍ಮೆಂಟ್ ಅಸೋಸಿಯೇಷನ್(ರೂಪ್ಸಾ) ಅವರು ಹಾಲೆನೂರು ಲೇಪಾಕ್ಷ ಅವರ ನೇತೃತ್ವದಲ್ಲಿ ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
ಈ ವೇಳೆ ಎರಡು ಸಂಘಟನೆಗಳ ಮುಖಂಡರು ಮತ್ತು ಸದಸ್ಯರ ನಡುವೆ ಮಾತಿನ ಚಕಮುಖಿ ನಡೆಯಿತು.
ಈ ವೇಳೆ ಮಾತನಾಡಿದ ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಸ ಸಿದ್ದಲಿಂಗೇಗೌಡ, ಅನಧಿಕೃತ ಶಾಲೆಗಳಿಗೆ ನೊಟೀಸ್ ನೀಡಿ ತಿಂಗಳು ಕಳೆದರೂ ಇದುವರೆಗೂ ಯಾವುದೇ ಕ್ರಮ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ವೇಳೆ ಮಕ್ಕಳ ಪ್ರವೇಶ ಪಡೆದ ನಂತರ ಶಾಲೆ ಮುಚ್ಚಿದರೆ, ಆ ಮಕ್ಕಳು ಎಲ್ಲಿಗೆ ಹೋಗಬೇಕು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನೊಟೀಸ್ ನೀಡಿ ಅನಧಿಕೃತ ಎಂದು ಘೋಷಿಸಿದ ಮೇಲೆ, ಆ ಶಾಲೆಗೆ ಮಕ್ಕಳು ಸೇರದಂತೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ‌.ಎನ್ ರಾಜಣ್ಣ!
ರೂಪ್ಸಾ ಕರ್ನಾಟಕದ ಹಾಲೆನೂರು ಲೇಪಾಕ್ಷಿ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳಿಲ್ಲ. ಪ್ರತಿವರ್ಷ ರಿನಿವಲ್ ಆಗದ ಶಾಲೆಗಳಿಗೆ ನೊಟೀಸ್ ನೀಡುವುದು ಸಹಜ. ನೊಟೀಸ್ ನೀಡಿದ ನಂತರ ಒಂದು ತಿಂಗಳ ಕಾಲಾವಕಾಶ ಇರುತ್ತದೆ. ಆ ವೇಳೆಯಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿ, ರಿನಿವಲ್ ಮಾಡಿಸಿಕೊಳ್ಳುತ್ತೇವೆ. ಇದು ಪ್ರತಿ ವರ್ಷದ ಪ್ರಕ್ರಿಯೆ. ಈ ಬಾರಿ ಅನ್‍ಲೈನ್ ಅರ್ಜಿ ಕರೆದಿದ್ದು, ಚುನಾವಣೆ ಘೋಷಣೆಯಾದ ಕಾರಣ ಕೆಲ ಕಾಲ ತಂತ್ರಾಂಶವನ್ನು ಇಲಾಖೆಯೇ ಸ್ಥಗಿತ ಮಾಡಿದ್ದರಿಂದ ಈ ಗೊಂದಲ ಉಂಟಾಗಿದೆ ಎಂದರು.

ಈಗಾಗಲೇ ಎಲ್ಲಾ ರೀತಿಯ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಜೂನ್ 30ವರೆಗೆ ಸಮಯಾವಕಾಶ ಇರುವುದರಿಂದ ಅಷ್ಟರೊಳಗೆ ನಾವು ರಿನಿವಲ್ ಮಾಡಿಸಿಕೊಳ್ಳುತ್ತವೆ. ನೊಟೀಸ್ ನೀಡಿರುವುದನ್ನೇ ತಪ್ಪಾಗಿ ತಿಳಿದು, ಪ್ರಚಾರದ ಆಸೆಯಿಂದ ಮಾನವ ಹಕ್ಕುಗಳ ಸೇವಾ ಕೇಂದ್ರದವರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದು ಸರಿಯಲ್ಲ. ನೊಟೀಸ್ ನೀಡಿರುವ 14 ಶಾಲೆಗಳಲ್ಲಿ ನೂರಾರು ಮಕ್ಕಳು ಕಲಿಯುತ್ತಿದ್ದಾರೆ. ಶಾಲೆ ಮುಚ್ಚಿದರೆ ಅವರ ಗತಿ ಏನು ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣನ ವಿಡಿಯೋವನ್ನು ಪತ್ರಕರ್ತರ ಮೊಬೈಲ್’ನಲ್ಲಿ ನೋಡಿದ ಗೃಹ ಸಚಿವ ಪರಮೇಶ್ವರ್: ವಿಡಿಯೋ
ರೂಪ್ಸಾ ಕರ್ನಾಟಕ ಮತ್ತು ಮಾನವ ಹಕ್ಕುಗಳ ಸೇವಾ ಕೇಂದ್ರದವರು ಪರಸ್ವರ ಪ್ರತಿಭಟನೆಗೆ ಇಳಿದ ಪರಿಣಾಮ ಸ್ಪಷ್ಟನೆ ನೀಡಿದ ಡಿಡಿಪಿಐ ರಂಗಧಾಮಯ್ಯ, ಶಾಲೆಗಳನ್ನು ಅಧಿಕೃತ, ಅನಧಿಕೃತ ಎಂದು ಘೋಷಿಸುವುದು ಬಿಇಓ ಕೆಲಸ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ನೀಡಿದ ಮಾನದಂಡಂತೆ ನವೀಕರಿಸುವುದು ನಡೆಯುತ್ತದೆ. ಈ ಬಾರಿ ಕೊಂಚ ವಿಳಂಬವಾಗಿದೆ. ಆಗಿರುವ ತೊಂದರೆಯನ್ನು ಇಲಾಖೆಯ ಗಮನಕ್ಕೆ ತಂದು ಬಗೆಹರಿಸಲು ಕ್ರಮಗೊಳ್ಳಲಾಗಿದೆ.‌ ಈಗಾಗಲೇ ಬಿಇಓ ಅವರಿಗೆ ಸೂಚನೆ ನೀಡಿದ್ದು, ಇಲಾಖೆಯ ಸುತ್ತೊಲೆಯ ಪ್ರಕಾರ ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ತುಮಕೂರು KSRTC ಹೊಸ ಬಸ್ ನಿಲ್ದಾಣ: ಕಾರ್ಯಾರಂಭಕ್ಕೂ ಮುನ್ನವೇ ಮಳೆ ನೀರು ಸೋರಿಕೆ! ವಿಡಿಯೋ
ಈ ವೇಳೆ ರೂಪ್ಸಾ ಕರ್ನಾಟಕದ ಶ್ರೀನಿವಾಸ್, ಪ್ರದೀಪ್, ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮಾನವ ಹಕ್ಕುಗಳ ಸೇವಾ ಕೇಂದ್ರದ ದರ್ಶನ್, ನವೀನ್, ಅರುಣ್ ಕೃಷ್ಣಯ್ಯ, ಡಮರುಗ ಉಮೇಶ್, ಉಮಾಶಂಕರ್, ಶಶಿಕಿರಣ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

About The Author

You May Also Like

More From Author

+ There are no comments

Add yours