ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ಬೀದಿಗಿಳಿದ ರೈತರು: ಪರಮೇಶ್ವರ್, ರಾಜಣ್ಣ ವಿರುದ್ಧ ಆಕ್ರೋಶ
Tumkurnews
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬೇರೊಂದು ಜಿಲ್ಲೆಗೆ ತೆಗದುಕೊಂಡು ಹೋಗುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ದುರಂತ. ನಿಮ್ಮನ್ನು ಈ ಜಿಲ್ಲೆಯ ಜನ ಎಂದಿಗೂ ಕ್ಷಮಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ.ಎನ್ ರಾಜಣ್ಣ!
ಸಂಯುಕ್ತ ಹೋರಾಟ-ಕರ್ನಾಟಕದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ,ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ಎಐಕೆಕೆಎಂಎಸ್, ಅಖಿಲಭಾರತ ಕಿಸಾನ್ ಸಭಾ, ಮಾಜಿಸೈನಿಕರ ಸಂಘ ಹಾಗೂ ಇನ್ನಿತರ ಸಂಘಟನೆಗಳು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ ನೀಡಿದ್ದ ಹೇಮಾವತಿ ಚೀಫ್ ಇಂಜಿನಿಯರ್ ಕಚೇರಿ ಮುತ್ತಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತುಮಕೂರು: ಜೆಸಿಬಿಗೆ ಅಡ್ಡ ನಿಂತ ಪೊಲೀಸ್! ಮುಂದೆ ಆಗಿದ್ದೇನು? ವಿಡಿಯೋ
ಕಳೆದ ಒಂದು ತಿಂಗಳಿನಿಂದ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದರೂ ಆಡಳಿತ ಪಕ್ಷದ ಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗುಬ್ಬಿ ಶಾಸಕ ವಾಸು, ಶಿರಾ ಶಾಸಕ ಟಿ.ಬಿ.ಜಯಚಂದ್ರ ಸೇರಿದಂತೆ ಆಡಳಿತ ಪಕ್ಷದವರು ಸರಕಾರದೊಂದಿಗೆ ಮಾತನಾಡಿ, ಲಿಂಕ್ ಕೆನಾಲ್ ರದ್ದು ಪಡಿಸಲು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಡಳಿತ ಪಕ್ಷದವರು ಜಾಣ ಕಿವುಡು, ಕುರುಡುತನ ಪ್ರದರ್ಶಿಸುತ್ತಿರುವುದು ತರವಲ್ಲ. ಈ ಕೂಡಲೇ ಸರಕಾರ ಮಧ್ಯೆ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ತುಮಕೂರು: ಅನಧಿಕೃತ ಶಾಲೆಗಳ ವಿರುದ್ಧ ಪ್ರತಿಭಟನೆಗೆ ಅಡ್ಡಿಪಡಿಸಿದ ರೂಪ್ಸಾ!
ಹೇಮಾವತಿಯಿಂದ ಮೂಲದಲ್ಲಿ ತುಮಕೂರು ಜಿಲ್ಲೆಗೆ 24.05 ಟಿ.ಎಂ.ಸಿ ನೀರು ಹಂಚಿಕೆಯಾಗಿದ್ದು, ಇದರ ಜೊತೆಗೆ 11-07-2019ರಲ್ಲಿ ಅಂದಿನ ಸರಕಾರ ನೀರಿನ ಹಂಚಿಕೆಯನ್ನು 25.03 ಟಿ.ಎಂ.ಸಿಗೆ ಹೆಚ್ಚಿಗೆ ಮಾಡಿ, ಶ್ರೀರಂಗ ಏತನೀರಾವರಿಯ ಮೂಲಕ ಮಾಗಡಿ ತಾಲೂಕಿನ 66 ಕೆರೆಗಳಿಗೆ ಹೇಮಾವತಿ ನೀರು ಹರಿಸಲು ಯೋಜನೆ ರೂಪಿಸಿದೆ. ಹೇಮಾವತಿ ಯೋಜನೆ ಆರಂಭವಾದ ಇಲ್ಲಿಯವರೆಗೆ ಹಂಚಿಕೆಯಾಗಿರುವ ಅಷ್ಟು ಪ್ರಮಾಣದ ನೀರು ಜಿಲ್ಲೆಗೆ ಹರಿದಿಲ್ಲ. ಹೀಗಿರುವಾಗ ಹೆಸರಿಗೆ ಮಾತ್ರ ಹೆಚ್ಚುವರಿ ಅಲೋಕೇಷನ್ ಮಾಡಿ, ತುಮಕೂರು ನಾಲೆಗಿಂತ 35 ಮೀಟರ್ ಕೆಳಹಂತದಲ್ಲಿರುವ 169ನೇ ಕಿ.ಮಿ.ಗೆ ಪೈಫ್ ಲೈನ್ ಮೂಲಕ ತೆಗೆದುಕೊಂಡು ಹೋಗಲು ಹೊರಟಿರುವುದು ಅವೈಜ್ಞಾನಿಕ ಎಂದರು.
ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
ಮಾಗಡಿಗೆ ನೀರು ತೆಗೆದುಕೊಂಡು ಹೋಗಲು ನಮ್ಮ ಅಭ್ಯಂತರವಿಲ್ಲ. ಆದರೆ ಹಾಲಿ ಇರುವ ನಾಲೆಯ ಮೂಲಕವೇ ನೀರು ತೆಗೆದುಕೊಂಡು ಹೋಗಲಿ, ಯಾವುದೇ ಕಾರಣಕ್ಕೆ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್‍ಗೆ ಅವಕಾಶ ನೀಡುವುದಿಲ್ಲ.
ಸರಕಾರ ಮದ್ಯಪ್ರವೇಶಿಸಿ, ರೈತರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿ, ಗೊಂದಲ ಬಗೆಹರಿಸುವುದರ ಜೊತೆಗೆ, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಎ.ಗೋವಿಂದರಾಜು ಎಚ್ಚರಿಸಿದರು. ಇದೇ ವೇಳೆ ಹೇಮಾವತಿ ನಾಲಾ ವಲಯದ ಮುಖ್ಯ ಇಂಜಿನಿಯರ್ ಫಣಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು?
ಎಐಕೆಕೆಎಂಎಸ್‍ನ ಎಸ್.ಎನ್.ಸ್ವಾಮಿ, ಮಾಜಿ ಸೈನಿಕ ನಂಜುಂಡಯ್ಯ, ಪ್ರಾಂತ ರೈತ ಸಂಘದ ಅಜ್ಜಪ್ಪ, ಬಿ.ಉಮೇಶ್, ಸಿಐಟಿಯುನ ಸೈಯದ್ ಮುಜೀಬ್, ರೈತ ಸಂಘದ ಹನುಮಂತೇಗೌಡ, ಎಐಕೆಎಸ್‍ನ ಕಂಬೇಗೌಡ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಶಂಕರಪ್ಪ,ವೆಂಕಟೇಗೌಡ, ಚಿಕ್ಕಬೋರೆಗೌಡ, ಕೆಂಪಣ್ಣ, ಸಿಪಿಐ(ಎಂ)ನ ಎನ್.ಕೆ.ಸುಬ್ರಮಣ್ಯ, ರೈತ ಸಂಘದ ಶಬ್ಬೀರ್,ಸಿ.ಜಿ.ಲೋಕೇಶ್, ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಬಿ.ಲಿಂಗಣ್ಣ, ತಾಲೂಕು ಅಧ್ಯಕ್ಷರುಗಳಾದ ಲೋಕೇಶ್, ಪಟ್ಟಬಾಲಯ್ಯ, ನಂಜುಂಡಯ್ಯ, ನವೀನ್, ಶ್ರೀರಂಗಯ್ಯ ಸೇರಿದಂತೆ ಹಲವರು ನೂರಾರು ಜನ ರೈತರು, ಹೋರಾಟಗಾರರು ಪಾಲ್ಗೊಂಡಿದ್ದರು.
+ There are no comments
Add yours