ಜೂನ್ 7 ರಿಂದ ಬೃಹತ್ ತುಮಕೂರು ಆರೋಗ್ಯ ಅಭಿಯಾನ
Tumkurunews
ತುಮಕೂರು: ಜಿಲ್ಲೆಯಲ್ಲಿ ಜೂನ್ 7 ರಿಂದ ಮೂರು ತಿಂಗಳುಗಳ ಕಾಲ ಬೃಹತ್ ಆರೋಗ್ಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಏಕ ಕಾಲದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಈ ಅಭಿಯಾನದಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಾಗುವುದು. ತಪಾಸಣೆ ವೇಳೆ ರೋಗ ಪತ್ತೆಯಾದಲ್ಲಿ ಸಂಬಂಧಿಸಿದ ರೋಗಕ್ಕೆ ಚಿಕಿತ್ಸೆ ನೀಡಲಾಗುವುದು. ಅಭಿಯಾನದ ಬಗ್ಗೆ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿ ವ್ಯಾಪ್ತಿಯಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಆರೋಗ್ಯ ಅಭಿಯಾನದಡಿ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ ಸುಮಾರು 17 ಲಕ್ಷ ಜನರಿದ್ದು, ಎಲ್ಲರಿಗೂ ರಕ್ತದೊತ್ತಡ, ಮಧುಮೇಹ, ಟಿಬಿ, ರಕ್ತ ಹೀನತೆ ಸೇರಿದಂತೆ ಹಲವು ಖಾಯಿಲೆಗಳಿಗೆ ತಂಡಗಳನ್ನು ರಚಿಸಿಕೊಂಡು ಚಿಕಿತ್ಸೆ ನೀಡಲಾಗುವುದು ಎಂದರು.
ಕೊರಟಗೆರೆ, ಮಧುಗಿರಿ, ಶಿರಾ ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಇಲ್ಲಿದೆ ಸಮಗ್ರ ವರದಿ
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ಚಿಕಿತ್ಸಾ ಸೌಲಭ್ಯವನ್ನು ನೀಡಲಾಗಿದೆ. ಜನರ ಮಾಹಿತಿಗಾಗಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಫಲಕಗಳನ್ನು ಅಳವಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ತುಮಕೂರು: ಚೆನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್: ರೈತರಿಂದ ಅರ್ಜಿ ಸ್ವೀಕಾರ
+ There are no comments
Add yours