ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ನ ಎಲ್ಲಾ ಕಾಮಗಾರಿಗಳಿಗೆ ತಡೆ: ಜಿಲ್ಲಾಧಿಕಾರಿ ಆದೇಶ

1 min read

 

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ನ ಎಲ್ಲಾ ಬಗೆಯ ಕಾಮಗಾರಿಗಳಿಗೆ ತಡೆ! ಹೋರಾಟಕ್ಕೆ ಫಲ

Tumkurnews
ತುಮಕೂರು: ಜಿಲ್ಲೆಯಲ್ಲಿ ಹೋರಾಟದ ಕಿಚ್ಚು ಹಚ್ಚಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಕೊನೆಗೂ ಬ್ರೇಕ್ ಬಿದ್ದಿದೆ!
ಹೌದು ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ನ ಎಲ್ಲಾ ಬಗೆಯ ಕಾಮಗಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ತಡೆ ನೀಡಿದ್ದಾರೆ. ಹೇಮಾವತಿ ಹೋರಾಟದ ತೀವ್ರತೆ ಹೆಚ್ಚಾಗಿ ಜಿಲ್ಲೆಯಲ್ಲಿ ಗುರುವಾರ ಬಿಗುವಿನ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಕಾಮಗಾರಿಗೆ ತಡೆ ನೀಡುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತರುವ ಪ್ರಯತ್ನ ಮಾಡಿದ್ದಾರೆ.

ಹೇಮಾವತಿ ಹೋರಾಟ ದಿಕ್ಕು ತಪ್ಪಿಸಬೇಡಿ: ಶಾಸಕ ಜ್ಯೋತಿಗಣೇಶ್
ಮಾಹಿತಿ ನೀಡಿದ ಎಸ್.ಪಿ: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ತಡೆ ಹಿಡಿದಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರು ಹೇಮಾವತಿ ಕೆನಾಲ್ ವಿರೋಧಿ ಹೋರಾಟ ಸಮಿತಿಯ ಮುಖಂಡರಿಗೆ ಮಾಹಿತಿ ನೀಡಿದ್ದಾರೆ.
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ನಿವಾಸದ ಎದುರು ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದ ಪ್ರಮುಖರನ್ನು ಎಸ್. ಪಿ ಅಶೋಕ್ ಕೆ.ವಿ ಅವರು ಡಿಎಆರ್ ಮೈದಾನಕ್ಕೆ ಬಂದು ಭೇಟಿ ಮಾಡಿದರು.

ಬಿಜೆಪಿ ಶಾಸಕ ಸುರೇಶ್ ಗೌಡ ಸೇರಿ ಹಲವರ ಬಂಧನ: ವಿಡಿಯೋ
ಬಂಧಿತರೊಂದಿಗೆ ಮಾತುಕತೆ ನಡೆಸಿದ ಅವರು, ‘ಜೂನ್ 6ರವರೆಗೆ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‍ನ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಜೂನ್ 6ರ ನಂತರ ಮುಖಂಡರುಗಳ ಸಭೆ ಕರೆದು ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಸೇರಿ ಹಲವರ ಬಂಧನ
ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆಯಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನು ಹೋರಾಟಗಾರರು ಮಧ್ಯಾಹ್ನದ ಬಳಿಕ ಹಿಂಪಡೆದರು. ಕೊನೆಗೂ ಹೋರಾಟಗಾರರಿಗೆ ತಾತ್ಕಾಲಿಕವಾಗಿ ಜಯ ಲಭಿಸಿದ್ದು, ಮುಂದೇನಾಗುತ್ತದೆ ಎಂದು ಕಾದು ನೋಡಬೇಕಿದೆ.

ಸೊಗಡು ಶಿವಣ್ಣ ಬಂಧನ: ವಿಡಿಯೋ

About The Author

You May Also Like

More From Author

+ There are no comments

Add yours