ಬಿಜೆಪಿ ಶಾಸಕ ಸುರೇಶ್ ಗೌಡ ಸೇರಿ ಹಲವರ ಬಂಧನ
Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟಕ್ಕೆ ಮುಂದಾಗಿದ್ದ ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸೊಗಡು ಶಿವಣ್ಣ ಬಂಧನ: ವಿಡಿಯೋ
ತುಮಕೂರು ನಗರ ಹೊರವಲಯದ ಗೊಲ್ಲಹಳ್ಳಿಯಲ್ಲಿರುವ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ನಿವಾಸದ ಎದುರು ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಪ್ರತಿಭಟನೆ ಪ್ರತಿಭಟನೆ ನಡೆಸಲು ಶಾಸಕ ಸುರೇಶ್ ಗೌಡ ಆಗಮಿಸಿದ್ದರು.
ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಸೇರಿ ಹಲವರ ಬಂಧನ
ಈ ವೇಳೆ ಶಾಸಕ ಸುರೇಶ್ ಗೌಡ ಸಹಿತ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಗರದ ಡಿಎಆರ್ ಮೈದಾನಕ್ಕೆ ಕರೆತಂದಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ!
+ There are no comments
Add yours