ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ!
Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸದ ಎದುರು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಗೃಹ ಸಚಿವ ಪರಮೇಶ್ವರ್ ಅವರ ತುಮಕೂರು ನಗರ ಹೊರವಲಯದಲ್ಲಿರುವ ಹೆಗ್ಗರೆಯಲ್ಲಿರುವ ಗೊಲ್ಲಹಳ್ಳಿಯ ನಿವಾಸದ ಎದುರು ಇಂದು ಬೆಳಗ್ಗೆ 11ಗಂಟೆಗೆ ಪ್ರತಿಭಟನೆ ನಡೆಯಲಿದೆ. ನೀರಾವರಿ ಹೋರಾಟಗಾರರು ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ, ಗುಬ್ಬಿ ಕ್ಷೇತ್ರದ ಬಿಜೆಪಿ ನಾಯಕ ದಿಲೀಪ್ ಮತ್ತಿತರರು ನೇತೃತ್ವ ವಹಿಸಲಿದ್ದಾರೆ.
ಸೊಗಡು ಶಿವಣ್ಣ ಬಂಧನ: ವಿಡಿಯೋ
ಸೊಗಡು ಶಿವಣ್ಣ ಬಂಧನ: ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಿದ್ಧತೆಗಳನ್ನು ಪರಿಶೀಲಿಸಲು ತೆರಳಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಗೃಹ ಸಚಿವರ ನಿವಾಸದ ಎದುರು ಪೊಲೀಸರು ಬಂಧಿಸಿದ್ದಾರೆ. ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆ ಗೊಲ್ಲಹಳ್ಳಿ ಬಳಿಗೆ ಸತ್ಯಾಗ್ರಹಕ್ಕೆ ತೆರಳಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಅವರನ್ನು ಪೋಲಿಸರು ಬಂಧಿಸಿದ್ದು, ತುಮಕೂರಿನ ಡಿ.ಆರ್. ಕಚೇರಿಗೆ ಕರೆದೊಯ್ದಿದ್ದಾರೆ.
ತುಮಕೂರು: ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧ: ಪರಮೇಶ್ವರ್ ನಿವಾಸದೆದುರು ಪ್ರತಿಭಟನೆಗೆ ನಿರ್ಧಾರ
ಹೋರಾಟಗಾರರ ಬಂಧನ: ಗೃಹ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ ಹಲವು ರೈತ ಮುಖಂಡರನ್ನು ಮಾರ್ಗಮಧ್ಯದಲ್ಲಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ ಎಂದು ಹೋರಾಟ ಸಮಿತಿ ಆರೋಪಿಸಿದೆ.
+ There are no comments
Add yours