ಸೋಮವಾರ ತುಮಕೂರು ಬಂದ್
Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಸೋಮವಾರ ತುಮಕೂರು ಬಂದ್ ನಡೆಸಲಾಗುವುದು ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾ ಕುಮಾರ್ ತಿಳಿಸಿದರು.
ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಸೇರಿ ಹಲವರ ಬಂಧನ
ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ಗುರುವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಎಂ.ಟಿ ಕೃಷ್ಣಪ್ಪ, ಬಿ.ಸುರೇಶ್ ಗೌಡ ಸೇರಿದಂತೆ ಹಲವರ ಬಂಧನ ಖಂಡಿಸಿ ನಗರದ ಡಿ.ಎ.ಆರ್ ಮೈದಾನದ ಎದುರು ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
ಸೊಗಡು ಶಿವಣ್ಣ ಬಂಧನ: ವಿಡಿಯೋ
ನಮ್ಮ ಹೋರಾಟವನ್ನು ಹತ್ತಿಕ್ಕುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತುಮಕೂರು ಬಂದ್‍ಗೆ ಕರೆ ನೀಡಲಾಗುವುದು. ಸೋಮವಾರ ತುಮಕೂರು ಬಂದ್ ನಡೆಸಲಾಗುವುದು. ಅಂದು ಬೆಳಗ್ಗೆ 8 ಗಂಟೆಯಿಂದಲೇ ಶಾಂತಿಯುತವಾಗಿ ಬಂದ್ ನಡೆಸಲಾಗುವುದು ಎಂದು ಅವರು ಹೇಳಿದರು.
ಬಿಜೆಪಿ ಶಾಸಕ ಸುರೇಶ್ ಗೌಡ ಸೇರಿ ಹಲವರ ಬಂಧನ: ವಿಡಿಯೋ
+ There are no comments
Add yours