ತುಮಕೂರು ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ 180 ಕೋಟಿ ಹಣ ಪಾವತಿ
Tumkurnews
ತುಮಕೂರು: ಜಿಲ್ಲೆಯ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಮಾಡಲಾಗುತ್ತಿದ್ದು, ಇಲ್ಲಿಯವರೆಗೂ 12,262 ರೈತರ ಖಾತೆಗೆ ಡಿಬಿಟಿ ಮೂಲಕ ಒಟ್ಟು 180.2ಕೋಟಿ ರೂ. ಪಾವತಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ಬಿ.ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಬ್ಬರಿ ಖರೀದಿ ಹಣ ಪಾವತಿಸದ ಸರ್ಕಾರ: ರೈತರಿಂದ ಕೊಬ್ಬರಿ ವಾಪಾಸ್ ಪಡೆಯುವ ಚಳುವಳಿಗೆ ಚಾಲನೆ
ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗದಿರುವ ಕಾರಣ ಜಿಲ್ಲೆಯಲ್ಲಿ ಒಟ್ಟು 130 ರೈತರಿಗೆ ಕೊಬ್ಬರಿ ಖರೀದಿ ಹಣ ಪಾವತಿಯಾಗದೆ ಬಾಕಿ ಉಳಿದುಕೊಂಡಿದ್ದು, ಪಾವತಿಯಾಗದೇ ಇರುವ ರೈತರ ವಿವರಗಳನ್ನು ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಪ್ರದರ್ಶಿಸಲಾಗಿದೆ. ಖಾತೆಗೆ ಹಣ ಜಮೆಯಾಗದ ರೈತರು ಬ್ಯಾಂಕುಗಳಿಗೆ ತೆರಳಿ ತಮ್ಮ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಿಸಿದ ನಂತರ ಹಣ ಪಾವತಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೊಬ್ಬರಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದಾದರೂ ಸಮಸ್ಯೆ ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 18004251552ಕ್ಕೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
KSRTC ವಿದ್ಯಾರ್ಥಿ ಬಸ್ ಪಾಸ್ ಚಾಲನೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಜಿಲ್ಲೆಯಲ್ಲಿರುವ 26 ಕೊಬ್ಬರಿ ಖರೀದಿ ಕೇಂದ್ರಗಳಿಂದ ಶೇ.78ರಷ್ಟು ಕೊಬ್ಬರಿ ಖರೀದಿಯಾಗಿದೆ. ರಾಜ್ಯ ಸರ್ಕಾರದಿಂದ ಕೃಷಿ ಮಾರಾಟ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾರಾಟ ಮಂಡಳಿಗೆ 400 ಕೋಟಿ ರೂ. ಬಿಡುಗಡೆಯಾಗಿದ್ದು, ಬಾಕಿ ಉಳಿದ ರೈತರಿಗೆ ಡಿಬಿಟಿ ಮೂಲಕ ಶೀಘ್ರವಾಗಿ ಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
+ There are no comments
Add yours