KSRTC ವಿದ್ಯಾರ್ಥಿ ಬಸ್ ಪಾಸ್ ಚಾಲನೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

1 min read

 

KSRTC ವಿದ್ಯಾರ್ಥಿ ಬಸ್ ಪಾಸ್ ಚಾಲನೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

Tumkurnews
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಕರಾರಸಾ‌‌‌ ನಿಗಮವು ಚಾಲನೆ ನೀಡಿದೆ.
ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವುದು.
1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು https://sevasindhuservices.karnataka.gov.in/buspassservices/ URL-
2. ವಿದ್ಯಾರ್ಥಿಗಳು ದಿನಾಂಕ: 31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
3. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಅದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
4. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ ಗಾಗಿ ಅರ್ಜಿ ಸಲ್ಲಿಸಲು Declaration Form ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ (https://ksrtc.karnataka.gov.in/studentpass) ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submit ಮಾಡುವುದು.
5. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು, ವಿದ್ಯಾರ್ಥಿ ಪಾಸುಗಳನ್ನು ದಿನಾಂಕ: 01.06.2024 ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
6. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
7. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ಯ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿರುತ್ತದೆ.

About The Author

You May Also Like

More From Author

+ There are no comments

Add yours