ಮತ ಎಣಿಕೆ: ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
Tumkurnews
ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯನ್ನು ಮುಕ್ತ, ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮತ ಎಣಿಕೆ ನಡೆಯಲಿರುವ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸದರಿ ಕಾಲೇಜುಗಳಿಗೆ ಲಗತ್ತಾಗಿರುವ ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಕ್ಕೆ ಜೂನ್ 4, 2024 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.
ಖಾಸಗಿ ಶಾಲೆಗಳಿಗೂ ರಜೆ:
ಮತ ಎಣಿಕೆ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಕೂಡ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಸ್ವಯಂ ಪ್ರೇರಿತವಾಗಿ ರಜೆ ಘೋಷಣೆ ಮಾಡಿವೆ.
ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ: ಇಡಿಸಿಎಸ್ ಬೇಜವಬ್ದಾರಿ
+ There are no comments
Add yours