ಶಾಲಾಕಾಲೇಜುಗಳ ಆವರಣ ಸ್ವಚ್ಛವಾಗಿಡಿ; ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
Tumkurnews
ತುಮಕೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹಗಲು ಹೊತ್ತಿನಲ್ಲಿ ರೋಗಗಳನ್ನು ಹರಡುವಂತಹ ಸೊಳ್ಳೆಗಳ ಕಡಿತದಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳ ಕೊಠಡಿಗಳನ್ನು ಪರಿಶೀಲಿಸಿ ಸ್ವಚ್ಛತೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ: ಇಡಿಸಿಎಸ್ ಬೇಜವಬ್ದಾರಿ
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿದಂತೆ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ನಡೆಸಲಾಗಿದ್ದು, ಕುಡಿಯುವ ನೀರಿನ ಪರೀಕ್ಷೆಯಲ್ಲಿ ನೀರಿನ ಅಶುದ್ಧತೆ ಬಗ್ಗೆ ವರದಿ ಬಂದ ತಕ್ಷಣ ಸಾರ್ವಜನಿಕರಿಗೆ ಅಶುದ್ಧ ಕುಡಿಯುವ ನೀರು ಪೂರೈಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಸೂಚಿಸಿದರು.
ಪರ್ಯಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಿಪಟೂರು ತಾಲೂಕಿನ ಈಚನೂರು ಕೆರೆಗೆ ಮಲೀನಯುಕ್ತ ನೀರು ಸೇರುತ್ತಿರುವ ಬಗ್ಗೆ ಇಂದೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಉಪವಿಭಾಗಾಧಿಕಾರಿ ಸಪ್ತಶ್ರೀ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ನ ಎಲ್ಲಾ ಕಾಮಗಾರಿಗಳಿಗೆ ತಡೆ: ಜಿಲ್ಲಾಧಿಕಾರಿ ಆದೇಶ
ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ರವೀಶ್ ಮಾತನಾಡಿ, ಜಿಲ್ಲೆಯಾದ್ಯಂತ 103 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿ ಮೂಲಕ ಹಾಗೂ 5 ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಮಳೆಯಿಂದ ಕೊಳವೆಬಾವಿಗಳಿಗೆ ಜಲ ಮರುಪೂರಣವಾಗಿ ಅಂತರ್ಜಲಮಟ್ಟ ಹೆಚ್ಚುತ್ತಿದ್ದು, ಈ ಬಗ್ಗೆ ಮರುಪರಿಶೀಲಿಸುವಂತೆ ಸೂಚಿಸಿದರು.
ತುಮಕೂರು: ಗುಡುಗು, ಸಿಡಿಲು ಸಹಿತ ಮಳೆ: ಜಿಲ್ಲೆಗೆ ಬಂತು ಜೀವ ಕಳೆ
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
+ There are no comments
Add yours