ತುಮಕೂರು: ಸ್ಟ್ರಾಂಗ್ ರೂಂ ಬಾಗಿಲು ತೆರೆದ ಡಿಸಿ: ಮತ ಎಣಿಕೆಗೆ ಚಾಲನೆ

1 min read

 

ಮತ ಎಣಿಕೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಿ : ಶುಭ ಕಲ್ಯಾಣ್

Tumkurnews
ತುಮಕೂರು: ಏಪ್ರಿಲ್ 26ರಂದು ನಡೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4, 2024ರಂದು ಮತ ಎಣಿಕೆ ಕಾರ್ಯ ನಡೆಯುವುದರಿಂದ ಮತ ಎಣಿಕೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭಗೊಳ್ಳುವುದರಿಂದ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ನಿಗದಿತ ಸಮಯಕ್ಕೆ ಮತ ಎಣಿಕಾ ಕೇಂದ್ರದಲ್ಲಿ ಹಾಜರಾಗುವಂತೆ ತಿಳಿಸಿದರು.

ತುಮಕೂರು: ಪತ್ರಕರ್ತನ ಕೊಲೆಗೆ ಸಂಚು, ಸುಪಾರಿ: ಮೂವರ ಬಂಧನ
ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡ ನಂತರದಲ್ಲಿ ಮತ ಎಣಿಕೆ ಏಜೆಂಟ್‍ಗಳು ಶಿಸ್ತುಬದ್ದವಾಗಿ ನಡೆದುಕೊಳ್ಳುವಂತೆ ಎಚ್ಚರವಹಿಸಬೇಕು ಎಂದರು.
ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ: ಇಡಿಸಿಎಸ್ ಬೇಜವಬ್ದಾರಿ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‍ನಂತೆ ಒಟ್ಟು 112 ಟೇಬಲ್, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್ ಎಣಿಕೆಗಾಗಿ 19(18+1) ಟೇಬಲ್ ಸೇರಿದಂತೆ ಒಟ್ಟು 131 ಟೇಬಲ್‍ಗಳಲ್ಲಿ ಮತ ಎಣಿಕೆಯನ್ನು ನಡೆಸಲಾಗುವುದು.
ಅಂಚೆ ಮತಪತ್ರಗಳ ಎಣಿಕೆಗಾಗಿ 2 ಕೊಠಡಿಯಲ್ಲಿ 18 ಎಣಿಕಾ ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‍ಗೂ ತಲಾ ಒಬ್ಬರು ಸಹಾಯಕ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ ಒಟ್ಟು 448 ಎಣಿಕಾ ಮೇಲ್ವಿಚಾರಕರು, ಎಣಿಕಾ ಸಹಾಯಕರು ಹಾಗೂ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಎಣಿಕಾ ಕಾರ್ಯಕ್ಕೆ ನಿಯೋಜಿಸಿದವರಿಗೆ ಈಗಾಗಲೇ 2 ಹಂತದ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ತುಮಕೂರು: ಮತ ಎಣಿಕೆ: ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
ಮಧುಗಿರಿ, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ತಲಾ 2 ಕೊಠಡಿಗಳಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ತಲಾ 1 ಕೊಠಡಿಯಲ್ಲಿ ಮಾಡಲಾಗುವುದು. ಪ್ರತಿ ಎಣಿಕಾ ಕೊಠಡಿಗೂ ಗೆಜೆಟೆಡ್ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಹೇಮಾವತಿ ಕೆನಾಲ್ ವಿರೋಧಿಸಿ ವಿಧಾನಸೌಧ ಚಲೋ, ಡಿಸಿ ಕಚೇರಿ ಎದುರು ಧರಣಿ, ಜಿಲ್ಲಾ ಬಂದ್ ನಿರ್ಧಾರ
ಪ್ರತಿ ಎಣಿಕಾ ಸುತ್ತಿನ ಅಂಕಿ ಅಂಶಗಳನ್ನು Encore ಸಾಫ್ಟ್‍ವೇರ್’ನಲ್ಲಿ ಎಂಟ್ರಿ ಮಾಡಿ ಅಪ್‍ಲೋಡ್ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು Encore ಸಾಫ್ಟ್‍ವೇರ್’ನಲ್ಲಿ ಅಪ್‍ಲೋಡ್ ಮಾಡಿದ ನಂತರ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತೆ ಆಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಶಿಲ್ದಾರ್ ರೇಷ್ಮ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ: ತುಮಕೂರು ಜಿಲ್ಲೆಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಸಾಮಾನ್ಯ ವೀಕ್ಷಕರಾದ ಕೆ.ವಾಸವ ಮತ್ತು ಮತ ಎಣಿಕೆ ವೀಕ್ಷಕರಾದ ಸಿಮ್ಮಿ ನಾಹಿದ್ ಅವರ ಸಮ್ಮುಖದಲ್ಲಿ ಇಂದು ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾಯಿತು.

About The Author

You May Also Like

More From Author

+ There are no comments

Add yours