ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ್ ಪೊಲೀಸ್ ಕಸ್ಟಡಿ
Tumkurnews
ಬೆಂಗಳೂರು: ವ್ಯಕ್ತಿಯೋರ್ವನ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಅವರಿಗೆ 6 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ A2 ಚಿತ್ರನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆತಂದ ಪೊಲೀಸರು ಅವರ ಆರೋಗ್ಯ ತಪಾಸಣೆ ನಡೆಸಿ, ಬಳಿಕ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.
ದರ್ಶನ್ ಅಭಿಮಾನಿಯೂ ಆಗಿದ್ದ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಅವರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ದರ್ಶನ್, ಅವರ ಸ್ನೇಹಿತೆ ಪವಿತ್ರಾಗೌಡ(A1) ಸೇರಿದಂತೆ 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಎಲ್ಲಾ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
(ಚಿತ್ರ: ಕೋರ್ಟ್’ನಲ್ಲಿ ನಟ ದರ್ಶನ್ ಹಾಜರಿರುವುದು)
(ವಿಡಿಯೋ: ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಆರೋಪಿಗಳನ್ನು ಪೊಲೀಸರು ಕೋರ್ಟ್’ನಿಂದ ಕರೆದೊಯ್ಯುತ್ತಿರುವುದು)
ಚಿತ್ರನಟ ದರ್ಶನ್, ಪವಿತ್ರಾಗೌಡ ಬಂಧನ
+ There are no comments
Add yours