ಚಿತ್ರನಟ ದರ್ಶನ್, ಪವಿತ್ರಾಗೌಡ ಬಂಧನ
Tumkurnews
ಮೈಸೂರು: ಕನ್ನಡ ಚಿತ್ರನಟ ದರ್ಶನ್ ತೂಗುದೀಪ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಅಭಿಮಾನಿ ಎನ್ನಲಾದ ಚಿತ್ರದುರ್ಗ ನಿವಾಸಿಯಾದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್, ಪವಿತ್ರ ಗೌಡ ಸೇರಿ 13 ಮಂದಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಕೊಲೆಯಾದ ವ್ಯಕ್ತಿ ರೇಣುಕಾಸ್ವಾಮಿ, ದರ್ಶನ್ ಅವರ ಅಭಿಮಾನಿಯಾಗಿದ್ದು, ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿಗಳ ಸಂಸಾರದಲ್ಲಿ ಪವಿತ್ರಾಗೌಡ ಪ್ರವೇಶದಿಂದ ಕಲಹ ಉಂಟಾಗಿದೆ ಎಂದು ಅಸಮಾಧಾನಗೊಂಡಿದ್ದನು. ರೇಣುಕಾಸ್ವಾಮಿ ಅವರು ಪವಿತ್ರಾಗೌಡ ಅವರ ಮೊಬೈಲ್’ಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ.
ಸದ್ಯ ದರ್ಶನ್, ಪವಿತ್ರಾಗೌಡ ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ರೇಣುಕಾಸ್ವಾಮಿ ಅವರ ಶವ ಜೂನ್ 9ರಂದು ಪತ್ತೆಯಾಗಿತ್ತು.
+ There are no comments
Add yours