ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Tumkurnews
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಡೇ-ನಲ್ಮ್ ಯೋಜನೆಯ ಉಪಘಟಕಗಳಾದ ಸ್ವಯಂ ಉದ್ಯೋಗ ಕಾರ್ಯಕ್ರಮ-ವೈಯಕ್ತಿಕ ಮತ್ತು ಗುಂಪು ಚಟುವಟಿಕೆ ಹಾಗೂ ಎಸ್.ಹೆಚ್.ಜಿ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮಗಳಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಬಡತನ ರೇಖೆಗಿಂತ ಕೆಳಗಿರುವ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಮಹಾನಗರಪಾಲಿಕೆಯ ಡೇ-ನಲ್ಮ್ ಶಾಖೆಯಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ವಾರ್ಷಿಕ ವರಮಾನ ಪ್ರಮಾಣ ಪತ್ರ, ಆಹಾರ ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ ಎರಡು ಭಾವಚಿತ್ರ, ಯೋಜನಾ ವರದಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಒಳಗಾಗಿ ಡೇ-ನಲ್ಮ್ ಶಾಖೆಗೆ ಸಲ್ಲಿಸಲು ಕೋರಿದೆ. ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
+ There are no comments
Add yours