ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆ
Tumkurnews
ತುಮಕೂರು: ಜಿಲ್ಲೆಯಾದ್ಯಂತ ಮುಸ್ಲಿಮ್ ಧರ್ಮಿಯರು ಸೋಮವಾರ ಬಕ್ರೀದ್ ಹಬ್ಬ ಆಚರಿಸಿ ಸಂಭ್ರಮಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9.30ಕ್ಕೆ ಮುಸ್ಲೀಮರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈದ್ಗಾ ಮೈದಾನಕ್ಕೆ ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ, ಅಡಿಷನಲ್ ಎಸ್ಪಿಗಳಾದ ವಿ. ಮರಿಯಪ್ಪ, ಅಬ್ದುಲ್ ಖಾದರ್, ಡಿವೈಎಸ್ಪಿ ಚಂದ್ರಶೇಖರ್ ಅವರು ಭೇಟಿ ನೀಡಿ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಈದ್ಗಾ ಮೈದಾನ ಸೇರಿದಂತೆ ನಗರದ ವಿವಿಧೆಡೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆಯಾಗಿದೆ.
ತುಮಕೂರು: ರೈಲು ನಿಲ್ದಾಣಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
+ There are no comments
Add yours