ಜೂ.22ರಂದು: ನಿಷೇಧಾಜ್ಞೆ ಜಾರಿ: ಆದೇಶ ಉಲ್ಲಂಘಿಸಿದರೆ ಬಂಧಿಸಲು ಆದೇಶ
Tumkurnews
ತುಮಕೂರು: ತುಮಕೂರು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 22ರಂದು ಡಿಪ್ಲೋಮಾ ಅಭ್ಯರ್ಥಿಗಳಿಗೆ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್’ಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ) ನಡೆಯಲಿದೆ. ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶಿಸಿದ್ದಾರೆ.
ತುಮಕೂರು: ರೈಲು ನಿಲ್ದಾಣಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
ನಿಷೇಧಾಜ್ಞೆಯು ಜೂನ್ 22ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ತುಮಕೂರು: ಸಂತೆ, ಜಾತ್ರೆ, ಸಾಮೂಹಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶ
+ There are no comments
Add yours