ಕೊರಟಗೆರೆ: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

Tumkurnews
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಕೊರಟಗೆರೆ ಪಟ್ಟಣದ ಡಾ: ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಕೊರಟಗೆರೆಯಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು ನಿಲಯದ ಮೇಲ್ವಿಚಾರಕರು, ಮತ್ತಿತರ ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿಯೇ ಇದ್ದುಕೊಂಡು ಯಾವುದೇ ರೀತಿಯ ಅವಘಡ, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಅಡುಗೆ ಕೋಣೆ, ವಸತಿ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿ ನಿಲಯದಲ್ಲಿ ಕಾಪಾಡಿರುವ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕಿ ಯಮುನಾ, ವಿದ್ಯಾರ್ಥಿ ನಿಲಯ ಮೇಲ್ಚಿಚಾರಕ ಲಕ್ಷ್ಮಿ ನರಸಯ್ಯ ಸೇರಿದಂತೆ ಇತರೆ ಸಿಬ್ಬಂದಿ ಹಾಜರಿದ್ದರು.

About The Author

You May Also Like

More From Author

+ There are no comments

Add yours