ಕೊರಟಗೆರೆ: ಜನಸ್ಪಂದನದಲ್ಲಿ ಡಿಸಿ, ಎಸ್ಪಿ ಜನರಿಗೆ ಹೇಳಿದ್ದೇನು?

1 min read

 

ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಜನಸ್ಪಂದನ

Tumkurnews
ತುಮಕೂರು: ಜನಸಾಮಾನ್ಯರು ಸ್ಥಳೀಯ ಮಟ್ಟದಲ್ಲಿ ಬಗೆಹರಿಯದ ತಮ್ಮ ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹಾಗೂ ಶೀಘ್ರಗತಿಯಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಪ್ರತೀ ತಿಂಗಳು ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದಿಂದ ಜನರಿದ್ದೆಡೆಯೇ ಸೇವೆ ಒದಗಿಸುವ ಸರ್ಕಾರದ ಮಹದಾಸೆಯಂತೆ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆ, ರಾಜ್ಯ ಮಟ್ಟದ ಸಮಸ್ಯೆಗಳಿದ್ದರೆ ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೊರಟಗೆರೆ: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
ಜಿಲ್ಲಾಡಳಿತವು ಪ್ರತೀ ಹಳ್ಳಿ-ಹಳ್ಳಿಗೆ ಹೋಗಿ ಜನರ ಕಷ್ಟ-ಸುಖಗಳನ್ನು ಆಲಿಸಿ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಸರ್ಕಾರದ ನಿರ್ದೇಶನದನ್ವಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಜನ ಸಾಮಾನ್ಯರು ಈ ಸದವಕಾಶವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಮಧುಗಿರಿ ತಾಲ್ಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ಘಟಿಸಿದ ವಾಂತಿ-ಭೇದಿ ಪ್ರಕರಣ ನಮಗೆ ಎಚ್ಚರಿಕೆ ಪಾಠವಾಗಿದೆ. ಕುಡಿಯುವ ನೀರಿನ ಬಗ್ಗೆ ಸಂಶಯ ಬಂದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿದ ಅವರು, ಯೋಗ್ಯವಲ್ಲದ ನೀರನ್ನು ಜನರಿಗೆ ಕುಡಿಯಲು ಪೂರೈಕೆ ಮಾಡಬಾರದು ಎಂದು ಅಧಿಕಾರಿಗಳು ಸೂಚಿಸಿದರು.

ತುಮಕೂರು: ಆಡಳಿಯ ಯಂತ್ರ‌ ಚುರುಕುಗೊಳಿಸಿ: ಸಚಿವ ಪರಮೇಶ್ವರ್
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಉತ್ತಮಗೊಳಿಸಬೇಕು. ಇನ್ನೂ ಒಂದು ವರ್ಷಗಳ ಕಾಲ ಸಮಯವಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಮಕ್ಕಳನ್ನು ತಯಾರು ಮಾಡಬೇಕೆಂದು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.
ಬರಪರಿಸ್ಥಿತಿಯಲ್ಲಿ ಕೈಗೊಂಡ ತುರ್ತು ಕುಡಿಯುವ ನೀರು ಕಾಮಗಾರಿಯಡಿ ಕೊರೆದ ಕೊಳವೆಬಾವಿಗಳಿಗೆ ಕೂಡಲೇ ವಿದ್ಯುದ್ದೀಕರಣಗೊಳಿಸಬೇಕೆಂದು ಬೆಸ್ಕಾಂ ಇಲಾಖೆಗೆ ಸೂಚನೆ ನೀಡಿದರು.

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಕರ್ತವ್ಯ ನಿರ್ಲಕ್ಷ್ಯತೆ ತೋರುವ ಯಾವುದೇ ಅಧಿಕಾರಿಗಳು ನಮಗೆ ಬೇಕಿಲ್ಲ. ಯಾವುದೇ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಗಳು ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶಗಳನ್ನು ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಡಿ ಅಂತರ್ಜಾತಿ ವಿವಾಹವಾದ ನರಸಿಂಹಮೂರ್ತಿ ಹಾಗೂ ಪೂಜಾ ದಂಪತಿಗಳಿಗೆ 1.25 ಲಕ್ಷ ರೂ.ಗಳ ಎನ್‍ಎಸ್‍ಸಿ ಬಾಂಡ್ ವಿತರಿಸಲಾಯಿತು. ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ, ಕಂದಾಯ ಇಲಾಖೆಯಿಂದ ವೃದ್ಧಾಪ್ಯವೇತನ, ವಿಧವಾ ವೇತನ, ಪವತಿ ಖಾತೆ ಪಹಣಿ, ವಸತಿ ಸೌಲಭ್ಯಗಳ ಕಾರ್ಯಾದೇಶಗಳನ್ನು ಹಾಗೂ ಕಾಡು ಪ್ರಾಣಿಗಳಿಂದ ದಾಳಿಗೊಳಗಾದವರಿಗೆ ಪರಿಹಾರ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ಎತ್ತಿನ ಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯನ್ನು ಕಳೆದುಕೊಂಡ ರೈತರು ತಮಗಿನ್ನೂ ಪರಿಹಾರ ಕೈ ಸೇರಿಲ್ಲವೆಂದು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಾಗ ರೈತರ ಜೀವನಾಧಾರವಾಗಿದ್ದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡದಿದ್ದರೆ ಹೇಗೆ? ಸರ್ಕಾರದಿಂದ ಪರಿಹಾರ ನೀಡಲು ಅಧಿಸೂಚನೆಯಾಗಿದ್ದರೂ ವಿತರಣೆಗೆ ಮೀನಾಮೇಷ ಏಕೆ? ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಎತ್ತಿನಹೊಳೆ ಯೋಜನೆ ಭೂಸ್ವಾಧೀನಾಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ತಾಲ್ಲೂಕಿನ ಬೆಂಡೊಣೆ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಗೆ ಓಡಾಡಲು ದಾರಿ ಬೇಕು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್. ಸುಕುಮಾರ್ ಅವರ ಪಹಣಿ ತಿದ್ದುಪಡಿ ಸೇರಿದಂತೆ ಮತ್ತಿತರ ಪ್ರಮುಖ ಸಮಸ್ಯೆಗಳ ಮನವಿ ಅರ್ಜಿಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಪರಿಹರಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ!
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಜನಸಾಮಾನ್ಯರು ಸುರಕ್ಷಿತವಾಗಿ ಶಾಂತಿ ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆಯಿಂದ ಜನಸ್ನೇಹಿ ಸೇವೆ ನೀಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಜನಪ್ರತಿನಿಧಿಗಳು, ತಹಶೀಲ್ದಾರ್ ಕೆ. ಮಂಜುನಾಥ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಸಹಾಯಕ ನಿರ್ದೇಶಕಿ ಯಮುನಾ ಸೇರಿದಂತೆ ಬೆಸ್ಕಾಂ, ಆರೋಗ್ಯ, ಶಿಕ್ಷಣ, ಪಟ್ಟಣ ಪಂಚಾಯತಿ, ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
181 ಅರ್ಜಿ ಸ್ವೀಕಾರ:
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿ ಸ್ವೀಕರಿಸಲು ಇಲಾಖಾವಾರು ಅರ್ಜಿ ಸ್ವೀಕಾರ ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 101 ಅರ್ಜಿ, ತಾಲ್ಲೂಕು ಪಂಚಾಯತಿ-25, ಪಟ್ಟಣ ಪಂಚಾಯತಿ-10, ಬೆಸ್ಕಾಂ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ-ತಲಾ 6, ಪಶುಸಂಗೋಪನಾ ಇಲಾಖೆ, ಕೃಷಿ ಇಲಾಖೆ, ಭೂಮಾಪನ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಲಾ-3, ವಿಶೇಷ ಭೂಸ್ವಾಧೀನಾಧಿಕಾರಿ(ಎತ್ತಿನ ಹೊಳೆ), ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಅರಣ್ಯ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ-ತಲಾ 2, ಪೊಲೀಸ್ ಇಲಾಖೆ, ಕೆಎಸ್‍ಆರ್‍ಟಿಸಿ, ಆದಿ ಜಾಂಬವ ಅಭಿವೃದ್ಧಿ ನಿಗಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ- ತಲಾ 1, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ-5, ಭೋವಿ ಅಭಿವೃದ್ಧಿ ನಿಗಮ-4 ಸೇರಿ ಒಟ್ಟು 181 ಅಹವಾಲುಗಳು ಸ್ವೀಕೃತವಾದವು.

ತುಮಕೂರು: ಬೀದಿಗಿಳಿದ ರೈತರು: ಪರಮೇಶ್ವರ್, ರಾಜಣ್ಣ ವಿರುದ್ಧ ತೀವ್ರ ಆಕ್ರೋಶ

About The Author

You May Also Like

More From Author

+ There are no comments

Add yours