ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ
Tumkurnews
ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು ಭರ್ತಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು: ಶಾಲಾಕಾಲೇಜುಗಳ ಆವರಣ ಸ್ವಚ್ಛವಾಗಿಡಿ; ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 8ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಸರ್ಕಾರದ ಆದೇಶದನ್ವಯ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು. ಆಯ್ಕೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ವ್ಯಾಜ್ಯ ತಕರಾರುಗಳಿಗೆ ಅವಕಾಶವಿರುವುದಿಲ್ಲವೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
+ There are no comments
Add yours