ತುಮಕೂರು ಜಿಲ್ಲಾ ಬಂದ್: ಶಾಲಾಕಾಲೇಜುಗಳಿಗೆ ರಜೆ ಇಲ್ಲ: ಜಿಲ್ಲಾಧಿಕಾರಿ

1 min read

 

ತುಮಕೂರು ಜಿಲ್ಲಾ ಬಂದ್: ಶಾಲಾಕಾಲೇಜುಗಳಿಗೆ ರಜೆ ಇಲ್ಲ: ಜಿಲ್ಲಾಧಿಕಾರಿ

Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜೂನ್ 25ರಂದು ತುಮಕೂರು ಜಿಲ್ಲಾ ಬಂದ್’ಗೆ ಕರೆ ನೀಡಲಾಗಿದ್ದು, ಶಾಲಾಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.
ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಸರ್ಕಾರಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ನಾಳೆ ತುಮಕೂರು ಬಂದ್ ನಿಜನಾ? ಇಲ್ಲಿದೆ ಖಚಿತ ಮಾಹಿತಿ
ಖಾಸಗಿಗೆ ರಜೆ: ಖಾಸಗಿ ಮತ್ತು ಅನುದಾನಿತ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು
ರೂಪ್ಸಾ(ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾ ಬಂದ್ ಬೆಂಬಲಿಸಿ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ರಜೆ‌ ಕೊಟ್ಟಿಲ್ಲ: ರೂಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷ ರಜೆ ಘೋಷಣೆ ಬಗ್ಗೆ ಹೇಳಿದ್ದಾರದರೂ ಬಹುತೇಕ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳು ರಜೆ ಘೋಷಣೆ ಮಾಡಿಲ್ಲ.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ನ ಎಲ್ಲಾ ಕಾಮಗಾರಿಗಳಿಗೆ ತಡೆ: ಜಿಲ್ಲಾಧಿಕಾರಿ ಆದೇಶ

About The Author

You May Also Like

More From Author

+ There are no comments

Add yours