ತುಮಕೂರು: ಜಿಲ್ಲಾ ಮಟ್ಟದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ

1 min read

 

ಜಿಲ್ಲಾ ಮಟ್ಟದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ

Tumkurnews
ತುಮಕೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಇವರ ವತಿಯಿಂದ ಜೂನ್ 27ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ತುಮಕೂರು: ಪ್ರಧಾನ ಮಂತ್ರಿ ಅವರ ಪ್ರಯತ್ನದಿಂದ ಯೋಗವು ಜಗತ್ತಿಗೆ ಪರಿಚಯಿಸಲ್ಪಟ್ಟಿದೆ: ಸಚಿವ ವಿ.ಸೋಮಣ್ಣ
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರ ಘನಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಆಗಮಿಸುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ವಿವಿಧ ಸಚಿವರು, ಶಾಸಕರು, ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಒಕ್ಕಲಿಗ ಸಮುದಾಯದ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.

About The Author

You May Also Like

More From Author

+ There are no comments

Add yours