ತುಮಕೂರು: ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

Tumkurnews
ತುಮಕೂರು: ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗಾಗಿ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಎಲ್ಲಾ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ, ಎಸ್.ಎಂ.ಎ.ಎಂ ಯಾಂತ್ರೀಕರಣ, ತೆಂಗು ಅಭಿವೃದ್ಧಿ, ಸಮಗ್ರ ತೋಟಗಾರಿಕೆ ಅಭಿವೃದ್ಧಿ, ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ, ಮಧುವನ ಮತ್ತು ಜೇನು ಸಾಕಾಣಿಕೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ತುಮಕೂರು: ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ?
ಅಡಿಕೆ ಬೆಳೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗಾಗಿ ಈ ಸಹಾಯಧನ ಪಡೆಯಬಹುದಾಗಿದ್ದು, ವಿಕಲಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಲ್ಪ ಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ವಿತರಿಸಲಾಗುವುದು.
ಆಸಕ್ತ ರೈತ ಫಲಾನುಭವಿಗಳು ತಾಲ್ಲೂಕು ತೋಟಗಾರಿಕೆ ಕಚೇರಿ, ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದಾಗಿದೆ.

ತುಮಕೂರು: ಒಂದು ಮಗು ಅಪಹರಣ ಕೇಸ್ ಹಿಂದೆ ಹೋದ ಪೊಲೀಸರಿಂದ 9 ಮಕ್ಕಳ ರಕ್ಷಣೆ!: ಮಕ್ಕಳ ಕಳ್ಳರ ಜಾಲ ಪತ್ತೆ
ಹೆಚ್ಚಿನ ಮಾಹಿತಿಗಾಗಿ ತುಮಕೂರು ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಕಸಬಾ-ಶಿವಕುಮಾರ್(ಮೊ.ಸಂ.7892664483), ಹೆಬ್ಬೂರು-ದರ್ಶನ್(9538287992), ಕೋರ-ಅಂಜನ್‍ಕುಮಾರ್(8970870918), ಗೂಳೂರು-ಕವಿತ (9620691223), ಬೆಳ್ಳಾವಿ-ವರಲಕ್ಷ್ಮಿ(7022679182), ಊರ್ಡಿಗೆರೆ-ಭವ್ಯ ಎಂ.ಎನ್. (8197516149) ಅವರನ್ನು ಸಂಪರ್ಕಿಸಬಹುದಾಗಿದೆ.

About The Author

You May Also Like

More From Author

+ There are no comments

Add yours