ತುಮಕೂರು: ಪತಿ ಮೇಲೆ ಪೆಟ್ರೋಲ್ ಸುರಿದು ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

1 min read

 

ಪತಿ ಮೇಲೆ ಪೆಟ್ರೋಲ್ ಸುರಿದು ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Tumkurnews
ಮಧುಗಿರಿ: ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ಮೇಲೆ ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ ಪತ್ನಿ ಮುತ್ಯಾಲಮ್ಮ(32) ಎಂಬಾಕೆಗೆ ನ್ಯಾಯಾಲಯವು ಜೀವಾವದಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ತುಮಕೂರು: ಒಂದು ಮಗು ಅಪಹರಣ ಕೇಸ್ ಹಿಂದೆ ಹೋದ ಪೊಲೀಸರಿಂದ 9 ಮಕ್ಕಳ ರಕ್ಷಣೆ!: ಮಕ್ಕಳ ಕಳ್ಳರ ಜಾಲ ಪತ್ತೆ
ಪ್ರಕರಣದ ವಿವರ: ಪಾವಗಡ ತಾಲ್ಲೂಕು ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಮ್ಮನಹಳ್ಳಿ ನಿವಾಸಿ ಗಂಗಾಧರ ಮತ್ತು ಮುತ್ಯಾಲಮ್ಮ ದಂಪತಿಗಳ ನಡುವೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು. ಪತಿ ಗಂಗಾಧರ ನಿತ್ಯ ಮದ್ಯ ಸೇವನೆ ಮಾಡಿ ಬಂದು ಮನೆಯಲ್ಲಿ ಪತ್ನಿ ಮುತ್ಯಾಳಮ್ಮಳ ಮೇಲೆ ಹಲ್ಲೆ ಮಾಡುವುದು, ಗಲಾಟೆ ಮಾಡುವುದು ಮಾಡುತ್ತಿದ್ದನು. ಇದರಿಂದ ಬೇಸತ್ತಿದ್ದ ಮುತ್ಯಾಲಮ್ಮ ಪತಿಯನ್ನು ಕೊಲೆ ಮಾಡಲು ನಿರ್ಧರಿಸಿದ್ದಳು.
ಅದರಂತೆ ಜನವರಿ 16, 2020ರಂದು ಎಂದಿನಂತೆ ಕುಡಿದು ಬಂದು ಮನೆಯಲ್ಲಿ ಚಾಪೆ ಮೇಲೆ ಮಲಗಿದ್ದ ಪತಿ ಗಂಗಾಧರನ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು. ಇದರಿಂದ ತೀವ್ರ ಗಾಯಗೊಂಡಿದ್ದ ಗಂಗಾಧರನು ನಾಲ್ಕು ದಿನಗಳ ಬಳಿಕ ಜನವರಿ 20ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದನು.

ತುಮಕೂರು: ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ?
ಈ ಹಿನ್ನೆಲೆಯಲ್ಲಿ ಮುತ್ತಾಳಮ್ಮಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಕಾರಣ ಮಧುಗಿರಿ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಯಾಧವ ಕರಕೇರ ಅವರು ಮುತ್ಯಾಳಮ್ಮಳಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

About The Author

You May Also Like

More From Author

+ There are no comments

Add yours