ವಿದ್ಯಾರ್ಥಿ ನಿಲಯಗಳ ಪ್ರವೇಶ: ಆನ್‍ಲೈನ್ ಅರ್ಜಿ ಆಹ್ವಾನ
Tumkurnews
ತುಮಕೂರು: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳ 2024-25ನೇ ಸಾಲಿನ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಹಿಂದಿನ ಎಸ್.ಹೆಚ್.ಪಿ ಪೋರ್ಟಲ್ ಬದಲಾಗಿ ಇಲಾಖೆಯ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬೇಕು.
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಹುದ್ದೆ: ಅರ್ಜಿ ಆಹ್ವಾನ
ಅರ್ಹ ಸರ್ಕಾರಿ ಮೆಟ್ರಿಕ್ ಪೂರ್ವ, ನಂತರದ ತರಗತಿ, ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ WWW.SWD.Kar.nic.in ನಲ್ಲಿ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮ್ಯಾನುಯಲ್ ಅರ್ಜಿಯನ್ನು ಜುಲೈ 15ರೊಳಗಾಗಿ ನಿಲಯಪಾಲಕರಿಗೆ ನೀಡಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ: ಇಡಿಸಿಎಸ್ ಬೇಜವಬ್ದಾರಿ
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರು, ನಿಲಯಪಾಲಕರನ್ನು ಸಂಪರ್ಕಿಸಬೇಕೆಂದು ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours