ಪಿಎಂಕೆಎಸ್‍ವೈ: ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಪಿಎಂಕೆಎಸ್‍ವೈ: ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

Tumkurnews
ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತು ಪಡಿಸಿ ಇತರೆ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಸಹಾಯಧನ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಿದೆ.
ಸದರಿ ಯೋಜನೆಯಡಿ ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿರುತ್ತದೆ. ಹನಿ ನೀರಾವರಿ ಅಳವಡಿಕೆಗೆ ಪ್ರತೀ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತಿದ್ದು, ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದು.
ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಮೊದಲ ಎರಡು ಹೆಕ್ಟೇರ್ ಪ್ರದೇಶದವರೆಗೆ ಇತರೆ ವರ್ಗದ ರೈತರಿಗೆ ಶೇ.55 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ( ಜಾತಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ) ಶೇ.90ರಷ್ಟು ಮತ್ತು ನಂತರದ 3 ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ ವರ್ಗದ ರೈತರಿಗೆ ಶೇ. 45ರಷ್ಟು ಸಹಾಯಧನ ನೀಡಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಮಾತ್ರ ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವರಿ ಪದ್ದತಿ ಹಾಳಾಗಿದ್ದಲ್ಲಿ, ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ 7 ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ದತಿ ಅಳವಡಿಸಿಕೊಂಡಲ್ಲಿ ಸಹಾಯಧನ ನೀಡಲಾಗುತ್ತದೆ.
ವಿಕಲಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಮತ್ತು ಅಲ್ಪ ಸಂಖ್ಯಾತರ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ವಿತರಿಸಲಾಗುತ್ತಿದ್ದು, ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಆಸಕ್ತ ರೈತ ಫಲಾನುಭವಿಗಳು ತಾಲ್ಲೂಕು ತೋಟಗಾರಿಕೆ ಕಚೇರಿ, ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ತುಮಕೂರು ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಕಸಬಾ-ಶಿವಕುಮಾರ್(ಮೊ.ಸಂ.7892664483), ಹೆಬ್ಬೂರು-ದರ್ಶನ್(9538287992), ಕೋರ-ಅಂಜನ್‍ಕುಮಾರ್(8970870918), ಗೂಳೂರು-ಕವಿತ (9620691223), ಬೆಳ್ಳಾವಿ-ವರಲಕ್ಷ್ಮಿ(7022679182), ಊರ್ಡಿಗೆರೆ-ಭವ್ಯ ಎಂ.ಎನ್. (8197516149) ಅವರನ್ನು ಸಂಪರ್ಕಿಸಬಹುದು.

About The Author

You May Also Like

More From Author

+ There are no comments

Add yours