ಗೃಹಲಕ್ಷ್ಮಿ ಯೋಜನೆ ಸೌಲಭ್ಯ : ಸಮಸ್ಯೆಗಾಗಿ ಸಹಾಯವಾಣಿ ಸಂಪರ್ಕಿಸಲು ಮನವಿ
Tumkurnews
ತುಮಕೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯುವಲ್ಲಿ ಸಮಸ್ಯೆಗಳಿದ್ದಲ್ಲಿ ನಗರದ ಎಂ.ಜಿ ರಸ್ತೆ ಜಿಲ್ಲಾ ಬಾಲಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ: 0816-2956624ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜು ಅವರು ಮನವಿ ಮಾಡಿದ್ದಾರೆ.
ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿ ಹಾಗೂ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ ಎಂಬ ಸದುದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್’ನಲ್ಲಿ ನಮೂದಿಸಿರುವ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.
ಡಿಬಿಟಿ ಮೂಲಕ ಕುಟುಂಬದ ಯಜಮಾನಿಯ ಖಾತೆಗೆ ಹಣ ಜಮೆಯಾಗದಿದ್ದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
+ There are no comments
Add yours