ಅಪರಿಚಿತ ಶವ ಪತ್ತೆ
Tumkurnews
ತುಮಕೂರು: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕೆರೆ ಬಳಿಯ ಸಿಮೆಂಟ್ ಕಾಲುವೆಯಲ್ಲಿ ಸುಮಾರು 65 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ವಾರಸುದಾರರು ತಿಳಿದು ಬಂದಿರುವುದಿಲ್ಲ.
ಮೃತ ವ್ಯಕ್ತಿಯು 5.6 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಗೋದಿ ಮೈ ಬಣ್ಣ ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ದೂರವಾಣಿ ಸಂಖ್ಯೆ 08132220229ನ್ನು ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ತುಮಕೂರು: ಅಮಾನಿಕೆರೆಯಲ್ಲಿ ಅಪರಿಚಿತ ಶವ ಪತ್ತೆ
+ There are no comments
Add yours