ಅಮಾನಿಕೆರೆಯಲ್ಲಿ ಅಪರಿಚಿತ ಶವ ಪತ್ತೆ
Tumkurnews
ತುಮಕೂರು: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಮಾನಿಕೆರೆಯಲ್ಲಿ ಸುಮಾರು 55 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ವಾರಸುದಾರರು ತಿಳಿದು ಬಂದಿರುವುದಿಲ್ಲ.
ಮೃತ ವ್ಯಕ್ತಿಯು 5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ ಹೊಂದಿದ್ದು, ಮೈಮೇಲೆ ಹಳದಿ ಬಣ್ಣದ ಅಂಗಿ, ನೀಲಿ ಬಣ್ಣದ ನಿಕ್ಕರ್, ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ದೂ. ಸಂ. 9480802900ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
+ There are no comments
Add yours